Breaking News
Home / featured / ರಾಜ್ಯದಾದ್ಯಂತ ‘ಮತ್ತೆ ಕಲ್ಯಾಣ’ ಚಳವಳಿ

ರಾಜ್ಯದಾದ್ಯಂತ ‘ಮತ್ತೆ ಕಲ್ಯಾಣ’ ಚಳವಳಿ

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸಮಾನ ಮನಸ್ಕರ ತೀರ್ಮಾನ

ಸಭೆಯಲ್ಲಿ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಸಾಹಿತಿ ಚಂದ್ರಶೇಖರ ಪಾಟೀಲ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಜಿ.ಎನ್. ನಾಗರಾಜ್, ಗೋ.ರು. ಚನ್ನಬಸಪ್ಪ, ಸಿ. ವೀರಣ್ಣ ಇದ್ದರು .

ಬೆಂಗಳೂರು: 12ನೇ ಶತಮಾನದಲ್ಲಿ ಚಾಲ್ತಿಯಲ್ಲಿದ್ದ ಶರಣರ ಕಲ್ಯಾಣ ರಾಜ್ಯದ ಪರಿಕಲ್ಪನೆಯನ್ನು ಪುನರ್‌ ಸ್ಥಾಪಿಸಲು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ‘ಮತ್ತೆ ಕಲ್ಯಾಣ’ ಚಳವಳಿ ಆಗಸ್ಟ್ 1ರಿಂದ ಆರಂಭವಾಗಲಿದ್ದು, ಈ ಸಂಬಂಧ ರೂಪುರೇಷೆ ಸಿದ್ಧಪಡಿಸಲು ಸ್ವತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ಅಧ್ಯಕ್ಷತೆಯಲ್ಲಿ ಪ್ರಗತಿಪರ ಚಿಂತಕರು ಮತ್ತು ಸಂಘಟಕರ ರಾಜ್ಯ ಮಟ್ಟದ ಸಭೆ ನಗರದಲ್ಲಿ ಭಾನುವಾರ ನಡೆಯಿತು.

ವೀರಮಾತೆ ಅಕ್ಕನಾಗಮ್ಮನ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನ, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ
ಮುಕ್ತಾಯವಾಗಲಿದೆ. ಕಾಯಕ ಚಳವಳಿಯ ಮಹತ್ವ, ಬಸವಣ್ಣ ಮತ್ತು ಇತರ ಶರಣರ ವಚನಗಳನ್ನು ಯುವ ಜನರಿಗೆ ತಲುಪಿಸುವ ಉದ್ದೇಶದಿಂದ ಒಂದು ತಿಂಗಳ ಅಭಿಯಾನ ನಡೆಸಲು ಉದ್ದೇಶಿಸಲಾಗಿದೆ ಎಂದು ಸಾಣೇಹಳ್ಳಿ ಸ್ವಾಮೀಜಿ ಹೇಳಿದರು.

‘ಮೂಲಭೂತವಾದಿಗಳು ನಮ್ಮ ವಿದ್ಯಾರ್ಥಿ ಹಾಗೂ ಯುವ ಜನರಿಂದ ವಿಕೃತ ಕೆಲಸಗಳನ್ನು ಮಾಡಿಸುವ ಮೂಲಕ ಅಟ್ಟಹಾಸ ಮೆರೆಯುತ್ತಿದ್ದಾರೆ. ಗಾಂಧೀಜಿ ಅವರನ್ನು ಕೊಂದ ಗೋಡ್ಸೆಯನ್ನೂ ಬೆಂಬಲಿಸುವವರ ಸಂಖ್ಯೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾನವೀಯತೆ, ವೈಚಾರಿಕತೆ, ಸಮಾನತೆ ಕುರಿತು ಸಂವಾದ ನಡೆಸಿ ಸಮಾಜಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ನಮ್ಮ ಉದ್ದೇಶ. ಪರ್ಯಾಯ ರಾಜಕೀಯದ ಉದ್ದೇಶ ಈ ಅಭಿಯಾನದಲ್ಲಿ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.‌

‘40 ವರ್ಷಗಳಿಂದ ಒಂದೇ ರೀತಿಯ ಮಾತುಗಳನ್ನು ಕೇಳುತ್ತಿದ್ದೇವೆ. ಹೀಗಾಗಿ ಪರಿಣಾಮಕಾರಿ ಬದಲಾವಣೆ ಸಾಧ್ಯವಾಗಿಲ್ಲ. ಹೊಸ ತಲೆಮಾರಿಗೆ ಚಳವಳಿಯ ನೇತೃತ್ವ ನೀಡುವ ಅಗತ್ಯವಿದೆ. ಸಿದ್ಧಾಂತಗಳ ಮಡಿವಂತಿಕೆ ಬಿಟ್ಟು ಎಲ್ಲರನ್ನೂ ಒಳಗೊಳ್ಳಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಹೇಳಿದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ಧರಾಮಯ್ಯ, ಸಾಹಿತಿ ಚಂದ್ರಶೇಖರ ಪಾಟೀಲ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ, ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ, ಕಾಂಗ್ರೆಸ್ ಮುಖಂಡ ಬಿ.ಎಲ್. ಶಂಕರ್, ಪ್ರಗತಿಪರ ಚಿಂತಕರಾದ ಸಿ.ಎಸ್. ದ್ವಾರಕನಾಥ್, ಇಂದೂಧರ ಹೊನ್ನಾಪುರ, ರಂಜಾನ್ ದರ್ಗಾ, ಅಗ್ನಿ ಶ್ರೀಧರ್, ಬಿ.ಟಿ. ಲಲಿತಾ ನಾಯಕ್, ಜಿ.ಎನ್. ನಾಗರಾಜ್, ಶ್ರೀಪಾದ ಭಟ್, ಮಾವಳ್ಳಿ ಶಂಕರ್, ಲೀಲಾ ಸಂಪಿಗೆ, ಯೋಗೇಶ್ ಮಾಸ್ಟರ್, ಬಿ. ಜಯಶ್ರೀ, ಸಿ. ವೀರಣ್ಣ, ಡಾ. ವಾಸು, ಮಲ್ಲಿಗೆ ಸೇರಿದಂತೆ ಹಲವರು ‘ಮತ್ತೆ ಕಲ್ಯಾಣ’ ಚಳವಳಿಗೆ ಬೆಂಬಲ
ವ್ಯಕ್ತಪಡಿಸಿದರು.

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸಮಾನ ಮನಸ್ಕರ ತೀರ್ಮಾನ

ಅಭಿಯಾನದ ಸ್ವರೂಪ

‘ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ, ವಿಚಾರ ಮಂಡನೆ, ಸಾಮರಸ್ಯ ಯಾತ್ರೆ, ವಚನಗಾಯನ, ನಾಟಕ ಪ್ರದರ್ಶನಗಳು ಅಭಿಯಾನದಲ್ಲಿ ಇರಲಿವೆ. ಈ ಯಾತ್ರೆ ವೇಳೆ ಆಸಕ್ತಿ ತೋರುವ ವಿದ್ಯಾರ್ಥಿಗಳನ್ನು ಗುರುತಿಸಿ ಸಾಣೇಹಳ್ಳಿ ಮಠದಲ್ಲಿ ತರಬೇತಿ ನೀಡಲಾಗುತ್ತದೆ’ ಎಂದು ಸಾಣೇಹಳ್ಳಿ ಸ್ವಾಮೀಜಿ ವಿವರಿಸಿದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!