Breaking News
Home / featured / ಬೌದ್ಧ, ಜೈನರು ಪ್ರತ್ಯೇಕರಾದಾಗ ಧರ್ಮ ಒಡೆಯಲಿಲ್ಲವೇ?

ಬೌದ್ಧ, ಜೈನರು ಪ್ರತ್ಯೇಕರಾದಾಗ ಧರ್ಮ ಒಡೆಯಲಿಲ್ಲವೇ?

‘ಬೌದ್ಧ, ಜೈನರು ಪ್ರತ್ಯೇಕರಾದಾಗ ಧರ್ಮ ಒಡೆಯಲಿಲ್ಲವೇ?’


ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಾಧಕರೊಡನೆ ಸಂವಾದ’ ಕಾರ್ಯಕ್ರಮದಲ್ಲಿ ಮನು ಬಳಿಗಾರ್ ಹಾಗೂ ಎಚ್.ಎನ್.ನಾಗಮೋಹನ್ ದಾಸ್ ಮಾತುಕತೆಯಲ್ಲಿ ತೊಡಗಿದ್ದರು.

ಬೆಂಗಳೂರು: ‘ಬುದ್ಧ ಹಾಗೂ ಮಹಾವೀರರು ಮೊದಲಿಗೆ ಹಿಂದೂಗಳಾಗಿದ್ದು, ಬಳಿಕ ಪ್ರತ್ಯೇಕ ಧರ್ಮ ರಚಿಸಿಕೊಂಡರು. ಆಗ ಧರ್ಮ ಒಡೆಯಲಿಲ್ಲವೇ? ಆಗ ಯಾಕೆ ಪ್ರಶ್ನೆ ಮಾಡಲಿಲ್ಲ?’ ಎಂದು ಕರ್ನಾಟಕ ಹೈಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್‌ ಪ್ರಶ್ನೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಾಧಕರೊಡನೆ ಸಂವಾದ’ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

ಪ್ರೊ. ಆರಾಧ್ಯ ಅವರು ‘ನ್ಯಾಯಾಂಗ ವೀರಶೈವ–ಲಿಂಗಾಯತ ಧರ್ಮವನ್ನು ಪ್ರತ್ಯೇಕ ಮಾಡಿತು’ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದಕ್ಕೆ ಗರಂ ಆದ ನಾಗಮೋಹನ್‌ ದಾಸ್‌ ಅವರು, ‘ಮುಸಲ್ಮಾನರು, ಪಾರ್ಸಿ, ಕ್ರೈಸ್ತ ಧರ್ಮಗಳಿಗೆ ಹಲವು ಹಿಂದೂಗಳು ಮತಾಂತರಗೊಂಡಿದ್ದಾರೆ. ಇದರಿಂದ ಧರ್ಮಗಳು ಪ್ರತ್ಯೇಕ ಆಗಲಿಲ್ಲವೇ? ಆಗ ಏಕೆ ಸುಮ್ಮನಿದ್ದಿರಿ?’ ಎಂದು ಪ್ರಶ್ನೆ ಮಾಡಿದರು.

‘ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಪರಿಗಣಿಸಿ ಎಂಬ ಪ್ರಸ್ತಾಪವಿತ್ತು. ಆದರೆ, ನ್ಯಾಯಾಲಯದ ವರದಿಯನ್ನು ಯಾರೂ ಓದುವುದಿಲ್ಲ. ವರದಿ ಓದಿದ್ದರೆ ನಿಮಗೆ ಇಂತಹ ಪ್ರಶ್ನೆಗಳು ಉದ್ಭವಿಸುವುದಿಲ್ಲ. ಪೂರ್ವಾಗ್ರಹಪೀಡಿತರಾಗಿ ಪ್ರಶ್ನೆ ಮಾಡಬಾರದು’ ಎಂದು ಕಿವಿ ಮಾತು ಹೇಳಿದರು.

ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ಯಾಕೆ ಇತ್ಯರ್ಥವಾಗದೆ ಹಾಗೆಯೇ ಉಳಿದಿದೆ? ಎಂಬ ಪ್ರಶ್ನೆಗೆ ‘ ವಿವಾದಗಳು ಕೋರ್ಟ್‌ ಮೆಟ್ಟಿಲೇರುವ ಮುನ್ನ ಸಂಬಂಧಪಟ್ಟವರು ಚರ್ಚಿಸಿ ತೀರ್ಮಾನ ಕೈಗೊಂಡರೆ ಪ್ರಕರಣಗಳು ಹೆಚ್ಚಾಗುವುದಿಲ್ಲ’ ಎಂದು ಉತ್ತರಿಸಿದರು.

ಸಂವಾದದಲ್ಲಿ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌, ಕಾರ್ಯದರ್ಶಿ ರಾಜಶೇಖರ ಹತಗುಂದಿ, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಇದ್ದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

Leave a Reply

Your email address will not be published. Required fields are marked *

error: Content is protected !!