Breaking News
Home / featured / ಸರ್ಕಾರಿ ಕಛೇರಿಗಳಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅಳವಡಿಸಲು ಮನವಿ

ಸರ್ಕಾರಿ ಕಛೇರಿಗಳಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅಳವಡಿಸಲು ಮನವಿ

ಮೈಸೂರು: ಮಹಾನ್ ಚೇತನ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬಸವಣ್ಣನವರಿಗೆ ಗೌರವ ಸಲ್ಲಿಸಲು 2017 ರ ಸಾಲಿನಲ್ಲಿ ಚಾಮರಾಜನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಿ ಎಂದು ಆದೇಶ ಹೊರಡಿಸಿ ಮುಖ್ಯಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದರು. ಆದರೆ ಎರಡು ವರ್ಷಗಳು ಕಳೆದರೂ ಆದೇಶವನ್ನು ಪಾಲಿಸಿಲ್ಲ. ಇದುವರೆಗೂ ಯಾವುದೇ ಸರ್ಕಾರಿ ಕಛೇರಿಗಳಲ್ಲಿ ಬಸವಣ್ಣನವರ ಪೋಟೋವನ್ನು ಅಳವಡಿಸಿಲ್ಲ. 886 ನೇ ಬಸವಣ್ಣನವರ ಜಯಂತಿಯ ಪ್ರಯುಕ್ತ ಕನ್ನಡ ಕ್ರಾಂತಿದಳದಿಂದ ರಾಜ್ಯಾದ್ಯಂತ ಈ ಆದೇಶ ಪಾಲನೆ ಮಾಡಬೇಕು ಎಂದು ಪ್ರಪ್ರಥಮವಾಗಿ ಬಸವಣ್ಣನವರ ಭಾವಚಿತ್ರ ಅಭಿಯಾನ ನೀಡಿ ಚಾಲನೆ ನೀಡಲಾಗಿದೆ. ಅದರ ಪ್ರಯುಕ್ತ ನಿನ್ನೆ ಮೈಸೂರು ನಗರದ ಕೆ.ಆರ್ ಪೊಲೀಸ್ ಠಾಣೆಯಲ್ಲಿನ ವೃತ್ತ ನಿರೀಕ್ಷಿತರಾದ ನಾರಾಯಣ್ ಸ್ವಾಮಿ ಅವರಿಗೆ ಭಾವಚಿತ್ರ ನೀಡಲಾಯಿತು.

ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಈ ಆದೇಶ ಪಾಲನೆ ಆಗಬೇಕು ಎಂದು ಕನ್ನಡ ಕ್ರಾಂತಿದಳ ಒತ್ತಾಯಿಸಿದೆ. ಬಸವಣ್ಣನವರ ಭಾವಚಿತ್ರ ಅಭಿಯಾನಕ್ಕೆ ಕನ್ನಡ ಕ್ರಾಂತಿದಳ ಚಾಲನೆ ನೀಡಿದ್ದು ಕನ್ನಡ ಕ್ರಾಂತಿದಳ ಸದಸ್ಯರು ಎಲ್ಲಾ ಕಛೇರಿಗಳಿಗೆ ಹೋಗಿ ಭೇಟಿ ನೀಡಿ ಬಸವಣ್ಣನವರ ಭಾವಚಿತ್ರ ನೀಡುವ ಮೂಲಕ ಮನವಿ ಮಾಡಲಾಗುತ್ತದೆ ಎಂದು ಕನ್ನಡ ಕ್ರಾಂತಿದಳದ ಯುವಘಟಕದ ಅಧ್ಯಕ್ಷ,  ಲಿಂಗಾಯತ ಯುವ ಮುಖಂಡ ಎಂ,ಆರ್, ತೇಜಸ್ವಿ ಪಾಟೀಲ್ ತಿಳಿಸಿದ್ದಾರೆ.

ಈ ಸಂದರ್ಭ ಹಿರಿಯ ಹೋರಾಟಗಾರರಾದ ಸತ್ಯಪ್ಪ , ಸುಬ್ರಹ್ಮಣ್ಯ , ಮಾದಪ್ಪ , ಹಾಗೂ ಬಸವಣ್ಣನವರ ಅಭಿಮಾನಿಗಳು ಉಪಸ್ಥಿತರಿದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!