Breaking News
Home / featured / ಬೆಳಗಾವಿಯಲ್ಲಿಂದು “ಮತ್ತೆ ಕಲ್ಯಾಣ” ಪೂರ್ವ ಸಿದ್ದತಾ ಸಭೆ

ಬೆಳಗಾವಿಯಲ್ಲಿಂದು “ಮತ್ತೆ ಕಲ್ಯಾಣ” ಪೂರ್ವ ಸಿದ್ದತಾ ಸಭೆ

ಬೆಳಗಾವಿ: ವಿಶ್ವಗುರು ಬಸವಣ್ಣನವರ ಮೂಲ ಆಶಯವಾಗಿರುವ ಮೇಲು ಕೀಳುಗಳಿಲ್ಲದ ಸಮಾನತೆಯ ಸಮಾಜ ನಿರ್ಮಾಣವೇ ಮತ್ತೆ ಕಲ್ಯಾಣ ಚಳುವಳಿಯ ಆಶಯವಾಗಿದೆ ಎಂದು ಗದುಗಿನ ತೋಂಟದಾರ್ಯ ಶ್ರೀ ಸಿದ್ದರಾಮ ಸ್ವಾಮೀಜಿಗಳು ಹೇಳಿದ್ದಾರೆ.
ಗುರುವಾರದಂದು ಎಸ್.ಜಿ.ಬಾಳೇಕುಂದ್ರಿ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಮತ್ತೆ ಕಲ್ಯಾಣ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದ ಅವರು, ಸಾಣೇಹಳ್ಳಿ ಶ್ರೀಗಳ ನೇತೃತ್ವದಲ್ಲಿ ಆಗಷ್ಟ 1 ರಿಂದ 30 ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಬೆಳಗಾವಿ ನಗರದಲ್ಲಿ ಆಗಷ್ಟ 26 ರಂದು ಮತ್ತೆ ಕಲ್ಯಾಣ ಕಾರ್ಯಕ್ರಮ ನಡೆಯಲಿದೆ ಎಂದರು.
ದೇವರು ಧರ್ಮಗಳ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಲ್ಲಬೇಕು. ಶೋಷಣೆ ಮುಕ್ತ ಸಮಾಜ ನಿರ್ಮಾಣವಾಗಬೇಕು ಎಂಬುದೆ ಬಸವಣ್ಣನವರ ಆಶಯವಾಗಿತ್ತು. ಈಗ ನಾವು 21 ನೇ ಶತಮಾನದಲ್ಲಿ 12 ನೇ ಶತಮಾನದ ಬಸವಾದಿ ಶರಣರ ಆಶಯಗಳನ್ನು ನೆನಪಿಸಿಕೊಂಡು, ಅವುಗಳನ್ನು ಮರುಸ್ಥಾಪಿಸಬೇಕಾಗಿದೆ. ಬಸವಾದಿ ಶರಣರ ಆಶಯಗಳನ್ನು ನಮ್ಮ ಇಂದಿನ ಯುವ ಪೀಳಿಗೆಗೆ ಹಾಗೂ ಭವಿಷ್ಯದ ಯುವ ಜನಾಂಗಕ್ಕೆ ತಲುಪಿಸಬೇಕಾಗಿದೆ ಎಂದರು.
ಬಸವಾದಿ ಶರಣರ ಆಶಯಗಳನ್ನು ಯುವ ಜನರಿಗೆ ಮನವರಿಕೆ ಮಾಡಿಕೊಳ್ಳುವ ದಿಸೆಯಲ್ಲಿ ಮತ್ತೆ ಕಲ್ಯಾಣದಲ್ಲಿ ಕಾಲೇಜಿ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಗುವದು. ನಂತರ ಸಾಮರಸ್ಯದ ನಡೆ. ವೇದಿಕೆ ಕಾರ್ಯಕ್ರಮ. ವಚನ ಸಂದೇಶ ಮತ್ತು ಬಸವಾದಿ ಶರಣರ ಆಶಯಗಳನ್ನು ಪರಿಚಯಿಸುವ ನಾಟಕಗಳ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಮಾತನಾಡಿ, ಮತ್ತೆ ಕಲ್ಯಾಣ ಎಂಬ ನೆನಪೆ ಒಂದು ರೋಮಾಂಚನ. 21 ನೇ ಶತಮಾಣದಲ್ಲಿ ನಿಂತು ನಾವಿಂದು 12 ನೇ ಶತಮಾನದ ಬಸವಾದಿ ಶರಣರ ಆಶಯಗಳನ್ನು ಈಡೇರಿಸಬೇಕಾಗಿದೆ. ಅನುಭವ ಮಂಟಪದ ವೈಭವವನ್ನು ಮರುಕಳಿಸಬೇಕಾಗಿದೆ. ಲಿಂಗಾಯತರು ಸೇರಿದಂತೆ ಎಲ್ಲ ಶೋಷಿತ ಸಮುದಾಯಗಳು ಬಸವ ತತ್ವದ ಅಡಿಯಲ್ಲಿ ಒಂದಾಗುವ ಮೂಲಕ ಸಮಾನತೆಯ ಸಮಾಜ ನಿರ್ಮಾಣ ಮಾಡಬೇಕಿದೆ. ಬಸವ ಸಂಸ್ಕøತಿ ಹಾಗೂ ಲಿಂಗಾಯತದ ಅಸ್ಮಿತೆಯನ್ನು ಅಳಿಸುವ ಹುನ್ನಾರದ ವಿರುದ್ಧ ಎದ್ದು ನಿಲ್ಲಬೇಕಾಗಿದೆ ಎಂದರು.


ನ್ಯಾಯವಾದಿ ಬಸವರಾಜ ರೊಟ್ಟಿ ಮಾತನಾಡಿ, ಮತ್ತೆ ಕಲ್ಯಾಣ ಎಂಬುದೆ ಒಂದು ಅದ್ಭುತವಾದ ನೆನಪು. ಬಸವಾದಿ ಶರಣರ ಆಶಯದ ಸಮಾನತೆಯ ಸಮಾಜ ನಿರ್ಮಾಣ ಮಾಡುವ ಉದ್ದೇಶದ ಮತ್ತೆ ಕಲ್ಯಾಣ ಕಾರ್ಯಕ್ರಮದ ಯಶಸ್ವಿಗಾಗಿ ಸಮಾಜದ ಪ್ರಿತಿಯೊಬ್ಬರು ಶ್ರಮಿಸಬೇಕಾಗಿದೆ. ಸಮಾಜದ ಜನರು ಈ ಕಾರ್ಯಕ್ರಮದ ಯಶಸ್ವಿಗಾಗಿ ತನು ಮನ ಧನದಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೆ ವೇದಿಕೆಯ ಮೇಲೆ ಸಿದಗೌಡ ಮೋದಗಿ ಅವರ ಸಂಪಾದಕತ್ವದ ರೈತ ಕ್ರಾಂತಿ ಪಾಖ್ಷಿಕ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ನಾಗನೂರು ರುದ್ರಾಕ್ಷಿಮಠದ ಶ್ರೀ ಸಾವಳಗೀಶ್ವರ ಸ್ವಾಮೀಜಿ, ಶೆಗುಣಸಿಯ ಮಹಾಂತದೇವರು. ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಅರವಿಂದ ಪರುಶೆಟ್ಟಿ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಅರುಣ ಕಟಾಂಬಳೆ, ಸಂಗಮೇಶ ವಾಲಿ, ಎಸ್.ವೈ.ಹಂಜಿ ಮುಂತಾದವರು ಉಪಸ್ಥಿತರಿದ್ದರು.
ಮಹಾನಂದ ಪರುಶೆಟ್ಟಿ ವಚನ ಪ್ರಾರ್ಥನೆ ಮಾಡಿದರು. ಬೆಳಗಾವಿ ಲಿಿಂಗಾಯ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಶಂಕರ ಗುಡಸ ಸ್ವಾಗತಿಸಿ ನಿರೂಪಿಸಿದರು. ಅಶೋಕ ಮಳಗಲಿ ವಂದಿಸಿದರು. ಅನೇಕ ಗಣ್ಯರು ಭಾಗವಹಿಸಿದ್ದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!