Breaking News
Home / featured / ಬಸವ ಸಂಸತಿ ಇಂದು ವೈದ್ಧಿಕರ ಕಪಿಮುಸ್ಠಿಯಲ್ಲಿದೆ.

ಬಸವ ಸಂಸತಿ ಇಂದು ವೈದ್ಧಿಕರ ಕಪಿಮುಸ್ಠಿಯಲ್ಲಿದೆ.

ಬೆಳಗಾವಿ: ಬಸವ ಸಮಾಜದಲ್ಲಿ ಬಲಪಂಥೀಯರ ಸಂಖ್ಯೆ ಹೆಚ್ಚುತ್ತಿರುವದು ಸಮಾಜದ ಸಂಘಟನೆ ಮತ್ತು ವೈಚಾರಿಕ ವಿಚಾರಧಾರೆಗಳ ಬೆಳವಣಿಗೆಗೆ ಬಹುದೊಡ್ಡ ಅಡ್ಡಿಯಾಗುತ್ತಿದೆ ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಗುರುಪೂರ್ಣಿಮೆಯ ನಿಮಿತ್ಯ ಬಸವ ಭೀಮ ಸೇನೆಯ ವತಿಯಿಂದ ಮಂಗಳವಾರದಂದು ನಗರದ ಶ್ರೀ ಬಸವೇಶ್ವರ ವೃತ್ತದ ಹತ್ತಿರದ ಶ್ರೀ ಬಸವೇಶ್ವರ ಉದ್ಯಾನದಲ್ಲಿರುವ ಶ್ರೀ ಬಸವಣ್ಣನವರ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವಣ್ಣನವರಿಗೆ ಗೌರವ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವ ಧರ್ಮಕ್ಕೆ ಬಾಹ್ಯ ಶಕ್ತಿಗಳಿಂದ ಯಾವ ಅಪಾಯವೂ ಇಲ್ಲ. ಆಂತರಿಕ ಶಕ್ತಿಗಳಿಂದಲೇ ಅಪಾಯ ಎದುರಿಸುತ್ತಿದೆ ಎಂದರು.
ಇಡಿ ಜಗತ್ತಿಗೆ ಬಸವಣ್ಣನವರು ಒಬ್ಬ ವಿಸ್ಮಯಕಾರಿ ನಾಯಕರಾಗಿ ವಿಜೃಂಭಿಸುತ್ತಿರುವ ಈ ಸಂದರ್ಭದಲ್ಲಿ ಬಸವಾದಿ ಶರಣರ ಕರ್ಮಭೂಮಿ ಕರ್ನಾಟಕದಲ್ಲಿಯೇ ಬಸವ ಸಮಾಜ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವದು ಸುಸಂಸ್ಕøತ ಸಮಾಜಕ್ಕೆ ಶೋಭೆ ಅಲ್ಲ. ನಾಡಿನ ಹಿತ, ಸಮಾಜದ ಒಳಿತು, ಸಮಾಜದ ಅಸ್ತಿತ್ವ, ಸಂಸ್ಕøತಿ ಹಾಗೂ ಅಸ್ಮಿತೆಯ ಉಳಿವಿಗಾಗಿ ಸಮಾಜದ ನಾಯಕರು ಬಲಪಂಥೀಯ ಶಕ್ತಿಗಳಿಂದ ದೂರ ಸರಿದು ನಿಜವಾದ ಬಸವ ಪ್ರೇಮಿಗಳಾಗುವ ಮೂಲಕ ಧರ್ಮ ಗುರುವಿನ ಋಣ ತೀರಿಸಬೇಕು ಎಂದು ಮನವಿ ಮಾಡಿದರು.
ಸಮಸ್ತ ಲಿಂಗಾಯತ ಮೀಸಲಾತಿ ಹೋರಾಟ ವೇದಿಕೆಯ ಅಧ್ಯಕ್ಷ ಬಿ.ಎಂ.ಚಿಕ್ಕನಗೌಡರ ಮಾತನಾಡಿ, ಧರ್ಮ ಮತ್ತು ಸಂಸ್ಕøತಿಯ ಉಳಿವಿನ ಹೋರಾಟದ ಜೊತೆಗೆ ಸಮಾಜದ ಬಡ ಮಕ್ಕಳ ಭವಿಷ್ಯದ ಬಗ್ಗೆಯೂ ನಾವಿಂದು ಹೋರಾಡಬೇಕಿದೆ. ಕೃಷಿ ಕಾಯಕ ಆಧಾರಿತ ಸಮಾಜವು ಮತ್ತೆ ಗೌರವಯುತ ಬದುಕು ಕಂಡುಕೊಳ್ಳಬೇಕಾಗಿದೆ. ಈ ದಿಸೆಯಲ್ಲಿ ಮೀಸಲಾತಿ ಹೋರಾಟ ನಡೆಸಲಾಗುತ್ತಿದೆ ಎಂದರು.
ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ಬಸವಣ್ಣನವರು ಅನುಭವ ಮಂಟಪದ ಮೂಲಕ ಸಾರಿದ ಸಮಾನತೆಯ ಕ್ರಾಂತಿ ಮತ್ತೆ ಆರಂಭಿಸಬೇಕಾಗಿದೆ. ಜಗತ್ತಿನ ಇತಿಹಾಸದಲ್ಲಿ ಶೋಷಿತ ಸಮುದಾಯಗಳನ್ನು ಹಾಗೂ ಮಹಿಳೆÉಯರನ್ನು ಒಂದು ಗೂಡಿಸಿ, ಅವರಿಗೆ ಸಮಾನತೆಯನ್ನು ಕಲ್ಪಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣ ಮಾಡಿರುವದು ಬಸವಣ್ಣನವರ ಬಹುದೊಡ್ಡ ಕೊಡುಗೆಯಾಗಿದೆ. ಆ ಕ್ರಾಂತಿಗಾಗಿ ನಾವು ಬಸವಣ್ಣನವರಿಗೆ ಋಣಿಯಾಗಿರಬೇಕು ಎಂದರು.
ಲಿಂಗಾಯತ ಸೇವಾ ಸಮಿತಿಯ ರಾಜು ಕುಂದಗೋಳ, ಸಂಚಾರಿ ಗುರುಬಸವ ಬಳಗದ ಬಸವರಾಜ ಪಾಟೀಲ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟನ ನಗರಾಧ್ಯಕ್ಷ ಪ್ರಭು ಬೆಣ್ಣಿ, ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಸಿದಗೌಡ ಮೋದಗಿ, ವಿರುಪಾಕ್ಷಿ ಯಲಿಗಾರ, ನ್ಯಾಯವಾದಿ ಚನ್ನಬಸಪ್ಪ ಬಾಗೇವಾಡಿ, ಆಕಾಶ ಹಲಗೇಕರ, ಕಿರಣ ಪಾಟೀಲ, ಬಿ.ಎಸ್.ಪಾಟೀಲ, ಸಿದ್ರಾಮ ಸಾವಳಗಿ, ಯಲ್ಲಪ್ಪ ಹುದಲಿ ಮುಂತಾದವರು ಭಾಗವಹಿಸಿದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!