Breaking News
Home / featured / ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಚಿತ್ರದುರ್ಗ ಬಸವ ಪ್ರತಿಮೆಗೆ ₹ 25 ಕೋಟಿ ಘೋಷಣೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಚಿತ್ರದುರ್ಗ ಬಸವ ಪ್ರತಿಮೆಗೆ ₹ 25 ಕೋಟಿ ಘೋಷಣೆ

ಚಿತ್ರದುರ್ಗ: ಮುರುಘಾ ಮಠದಲ್ಲಿ ಸ್ಥಾಪಿಸುತ್ತಿರುವ 325 ಅಡಿ ಎತ್ತರದ ಬಸವ ‍ಪ್ರತಿಮೆಗೆ ರಾಜ್ಯ ಸರ್ಕಾರ ₹ 25 ಕೋಟಿ ಅನುದಾನ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದರು.

ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಶರಣ ಸಂಸ್ಕೃತಿ ಉತ್ಸವದಲ್ಲಿ ಶಿವಮೂರ್ತಿ ಮುರುಘಾ ಶರಣರ 20 ಕೃಷಿಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ‘ಬಸವ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಸಹಕರಿಸಬೇಕು’ ಎಂಬ ಶರಣರ ಮನವಿಗೆ ಯಡಿಯೂರಪ್ಪ ಸ್ಪಂದಿಸಿದರು.

‘ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರತಿಮೆಗೆ ₹ 10 ಕೋಟಿ ಅನುದಾನ ನೀಡಿ ಭೂಮಿ ಪೂಜೆ ನೆರವೇರಿಸಿದ್ದೆ. ದೇವರ ಆಶೀರ್ವಾದದಿಂದ ಮತ್ತೆ ಮುಖ್ಯಮಂತ್ರಿಯಾಗಿದ್ದು, ಮೂರು ವರ್ಷ ಪೂರೈಸುವ ಇಚ್ಛೆ ಹೊಂದಿದ್ದೇನೆ. ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಬಸವಣ್ಣನ ಪ್ರತಿಮೆಗೆ ಅನುದಾನ ನೀಡಲಾಗುವುದು’ ಎಂದು ಹೇಳಿದರು.

‘ಬುದ್ಧ, ಬಸವ ಮತ್ತು ಗಾಂಧೀಜಿ ಅವರ ವಿಚಾರಧಾರೆ ಭಾಷಣಕ್ಕೆ ಸೀಮಿತ ಆಗುತ್ತಿವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಯಾರೊಬ್ಬರು ಪ್ರಯತ್ನಿಸುತ್ತಿಲ್ಲ. ಇದರಿಂದ ಸಮಾಜ ದಲ್ಲಿರುವ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘12ನೇ ಶತಮಾನದಲ್ಲಿ ನಡೆದ ವಚನ ಚಳವಳಿ ಸಮಾನತೆಯನ್ನು ಪ್ರತಿಪಾದಿಸಿತು. ಬಸವಣ್ಣ, ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ನೇತೃತ್ವದ ಈ ಚಳವಳಿ ಕಾಯಕ ತತ್ವ ಭೋದಿಸಿದೆ. ಈ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದು ಸಲಹೆ ನೀಡಿದರು.

‘ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ₹ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ. ಕನಕ ಹಾಗೂ ವಾಲ್ಮೀಕಿ ಗುರುಪೀಠಕ್ಕೂ ಅನುದಾನ ನೀಡಿದ್ದೆ. ನನಗೆ ಮನುಷ್ಯ ಜಾತಿ ಬಿಟ್ಟರೆ ಬೇರೆ ಜಾತಿ ಗೊತ್ತಿಲ್ಲ’ ಎಂದು ಹೇಳಿದರು.

ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ‘ಚಿತ್ರದುರ್ಗಕ್ಕೆ ಬರಬೇಕಿದ್ದ ಭದ್ರಾ ನೀರನ್ನು ಬೇರೆ ಕಡೆಗೆ ತಿರುಗಿ ಸಿಕೊಳ್ಳಲಾಗಿದೆ. ಇದರಿಂದ ಮತ್ತೆ ಬೇಡುವ ಸ್ಥಿತಿ ಬಂದಿದೆ. ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಚಿತ್ರದುರ್ಗ ತಾಲ್ಲೂಕಿನ ಕೆರೆ ತುಂಬಿಸಬೇಕು ಹಾಗೂ ಜಿಲ್ಲೆಯಲ್ಲಿ ಜಲ ವಿಶ್ವವಿದ್ಯಾಲಯ ಸ್ಥಾಪಿಸಬೇಕು’ ಎಂದು ಸಲಹೆ ನೀಡಿದರು.

‘ಬಸವಣ್ಣ, ಗಾಂಧೀಜಿ ಇಬ್ಬರೂ ಮಹಾತ್ಮರು. ಗಾಂಧೀಜಿ ಮೇಲೆ ಬಸವಣ್ಣ ನವರ ಪ್ರಭಾವವಿದೆ. ಮಾನವೀಯತೆ, ಅಹಿಂಸೆಯನ್ನು ಇಬ್ಬರೂ ಪ್ರತಿಪಾದಿಸಿದರು. ಅವರ ತತ್ವಗಳನ್ನು ಬೆಸೆಯುವ ಪ್ರಯತ್ನ ಆಗಬೇಕಿದೆ’ ಎಂದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

Leave a Reply

Your email address will not be published. Required fields are marked *

error: Content is protected !!