Breaking News
Home / featured / ಬಿಜೆಪಿಯವರು ಎಲ್ಲ ಸಮಾಜದವರಿಗೆ ಗೌರವ ಕೊಡಲಿ. ಎಂ.ಬಿ ಪಾಟೀಲ.

ಬಿಜೆಪಿಯವರು ಎಲ್ಲ ಸಮಾಜದವರಿಗೆ ಗೌರವ ಕೊಡಲಿ. ಎಂ.ಬಿ ಪಾಟೀಲ.

ಬಿಜೆಪಿ ನಾಯಕರು ವಿರುದ್ಧ ಎಂ ಬಿ ಪಾಟೀಲ್ ಆಕ್ರೋಶ

ಬೆಂಗಳೂರು: ಲಿಂಗಾಯತರಾಗಲೀ ಅಥವಾ ಇನ್ಯಾವುದೇ ಸಮುದಾಯದವರಾಗಲೀ ಕಚೇರಿಗೆ ಬರಬೇಡಿ ಎಂದು ಹೇಳುವುದು ಸರಿಯಲ್ಲ ಎಂದು ಮಾಜಿ ಗೃಹಸಚಿವ ಹಾಗೂ ವಿಜಯಪುರ ಶಾಸಕ ಎಂ.ಬಿ.ಪಾಟೀಲರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ ವರ್ತನೆಯನ್ನು ಖಂಡಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಬಿಜೆಪಿ ಕಚೇರಿಗೆ ಲಿಂಗಾಯತ ಸಮುದಾಯದ ಕಾರ್ಯಕರ್ತರ ಪ್ರವೇಶ ನಿರ್ಬಂಧ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಕಾರ್ಯಕರ್ತರಿಗೆ ಬಿಜೆಪಿ ಕಚೇರಿ ಪ್ರವೇಶ ನಿಷಿದ್ಧ ಹಾಗೂ ಅಲ್ಲಿರುವ ಕೆಲಸಗಾರರನ್ನು ಹೊರಗೆ ಹಾಕಿರುವ ವಿಚಾರ ತಮಗೆ ಮಾಧ್ಯಮಗಳ ಮೂಲಕ ತಿಳಿದುಬಂದಿದ್ದು, ಇದು ಎಷ್ಟರಮಟ್ಟಿಗೆ ಸರಿ ಎಂಬುದು ತಮ್ಮ ಗಮನಕ್ಕೆ ಇನ್ನೂ ಬಂದಿಲ್ಲ. ಒಂದು ವೇಳೆ ಇದು ಸತ್ಯ ಆಗಿದ್ದರೆ ಈ ಕ್ರಮ ದುರದೃಷ್ಟಕರ.ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಹಳ ಗಂಭೀರವಾಗಿ ವಿಚಾರ ಮಾಡಬೇಕಾಗುತ್ತದೆ. ಯಾವುದೇ ಸಮುದಾಯದವರನ್ನು ಬರಬೇಡಿ ಎಂದು ಹೇಳುವುದು ತಪ್ಪು ಎಂದು ಹೇಳಿದರು.

ಲಿಂಗಾಯತರ ಬೆಂಬಲ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಸಿಕ್ಕಿದೆ. ಆದರೂ ಸಮುದಾಯಕ್ಕೆ ಈ ರೀತಿ ಅಪಮಾನ ಮಾಡಿರುವುದು ಸರಿಯಲ್ಲ. ಈ ಬಗ್ಗೆ ಯಡಿಯೂರಪ್ಪ ಆದಿಯಾಗಿ ಎಲ್ಲರೂ ವಿಚಾರ ಮಾಡಬೇಕು ಎಂದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

Leave a Reply

Your email address will not be published. Required fields are marked *

error: Content is protected !!