Breaking News
Home / featured / ಬಿಎಸ್‌ವೈ ಆಡಿಯೋ ರಿಲೀಸ್ ಮಾಡಿಸಿದ್ದು ನಳಿನ್ ಕುಮಾರ್ ಕಟೀಲ್..!

ಬಿಎಸ್‌ವೈ ಆಡಿಯೋ ರಿಲೀಸ್ ಮಾಡಿಸಿದ್ದು ನಳಿನ್ ಕುಮಾರ್ ಕಟೀಲ್..!

ಬಿಎಸ್‌ವೈ ಆಡಿಯೋ ರಿಲೀಸ್ ಮಾಡಿಸಿದ್ದು ನಳಿನ್ ಕುಮಾರ್ ಕಟೀಲ್..!

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅನರ್ಹ ಶಾಸಕರ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ, ಮತ್ತೊಂದು ಸ್ಪೋಟಕ ಬಾಂಬ್ ಅನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಿಡಿಸಿದ್ದಾರೆ. ಅದು ಆಡಿಯೋ ಲೀಕ್ ಮಾಡಿದ್ದೇ ಬಿಜೆಪಿಯ ರಾಜ್ಯಾಧ್ಯಕ್ಷರಾದಂತ ನಳೀನ್ ಕುಮಾರ್ ಕಟೀಲ್ ಎಂಬುದಾಗಿ ಹೊಸ ಬಾಂಬ್ ಸಡಿಸಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸರ್ಕಾರ ಬೀಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರ ಬಗ್ಗೆ ರಾಷ್ಟ್ರೀಯ ನಾಯಕರು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ಆಡಿಯೋ ಲೀಕ್ ಮಾಡಿದ್ದು ಮತ್ತಾರೂ ಅಲ್ಲ, ನಳೀನ್ ಕುಮಾರ್ ಕಟೀಲ್ ಅವರೇ ಆಗಿದ್ದಾರೆ ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಒಂದು ವೇಳೆ ಅವರು ಅಲ್ಲ ಅಂದ್ರೇ, ಆಡಿಯೋ ಲೀಕ್ ಆಗಿದ್ದು ಹೇಗೆ..? ಇಲ್ಲವಾದಲ್ಲಿ ಲೀಕ್ ಮಾಡಿದ್ದು ಯಾರು..? ಅವರ ಕೈಗೆ ಸಿಕ್ಕಿದ್ದಾರೂ ಹೇಗೆ.? ಅದು ಕೈ ನಾಯಕರಿಗೆ ಸಿಕ್ಕಿದ್ದು ಹೇಗೆ ಎಂಬುದಾಗಿ ಬಿಜೆಪಿಯವರನ್ನು ಪ್ರಶ್ನೆಮಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇದು ಬಿಜೆಪಿಯವರಿಂದಲೇ ಬಿಡುಗಡೆಯಾಗಿರೋ ಆಡಿಯೋ, ನಳೀನ್ ಕುಮಾರ್ ಕಟೀಲ್ ಅವರೇ ಸರ್ಕಾರ ಕೆಡವಲು ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವರದಿ ಮೂಲ :ನ್ಯೂಸ್ ಕನ್ನಡ ಬ್ಲಾಗ್

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!