Breaking News
Home / featured / ಮತಾಂದರಿಂದ ವೈಚಾರಿಕರಿಗೆ ಕೊಲೆ ಬೆದರಿಕೆ

ಮತಾಂದರಿಂದ ವೈಚಾರಿಕರಿಗೆ ಕೊಲೆ ಬೆದರಿಕೆ

ಬೆಳಗಾವಿ: ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ನಿಜಗುಣಪ್ರಭು ಶ್ರೀಗಳಿಗೆ ಪುನಃ ಜೀವ ಬೆದರಿಕೆ ಹಾಕುತ್ತಿರುವ ವೈಚಾರಿಕ ಚಿಂತನೆಗಳ ವಿರೋಧಿ ಮತಾಂಧರನ್ನು ತಕ್ಷಣ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕು. ಶ್ರೀಗಳಿಗೆ ಹೆಚ್ಚಿನ ಭದ್ರತೆ ನೀಡುವಂತೆ ಆಗ್ರಹಿಸಿ, ವಿವಿಧ ಬಸವಾಭಿಮಾನಿ ಸಂಘಟನೆಗಳ ಪ್ರಮುಖ ಕಾರ್ಯಕರ್ತರು ಬಸವಾಭಿಮಾನಿಗಳ ಒಕ್ಕೂಟದ ನೇತೃತ್ವದಲ್ಲಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಸೋಮವಾರದಂದು ಒಕ್ಕೂಟದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ, ದೇಶ ವಿದೇಶಗಳಲ್ಲಿ, ದೇಶದ ವಿವಿಧ ರಾಜ್ಯಗಳಲ್ಲಿ, ರಾಜ್ಯದ ಮೂಲೆ ಮೂಲೆಯಲ್ಲಿ ಬಸವಾದಿ ಶರಣರ ವೈಚಾರಿಕ ಚಿಂತನೆಗಳ ಮೂಲಕ ಜಾಗೃತಿ ಮೂಡಿಸುತ್ತಿರುವ ನಿಜಗುಣಪ್ರಭು ಸ್ವಾಮೀಜಿಗಳ ವೈಚಾರಿಕ ಚಿಂತನೆಗಳನ್ನು ಅರಗಿಸಿಕೊಳ್ಳಲಾಗದ ಕೆಲ ಮತಾಂಧರು ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಹಾಕುತ್ತಿರುವ ಹೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು.
ರಾಷ್ಟ್ರೀಯ ಬಸವ ಸೇನೆಯ ಅಧ್ಯಕ್ಷ ಶಂಕರ ಗುಡಸ್ ಮಾತನಾಡಿ, ಈಗಾಗಲೇ ಎಂ.ಎಂ.ಕಲಬುರಗಿ ಮತ್ತು ಗೌರಿ ಲಂಕೇಶರನ್ನು ಮತಾಂಧರು ಬಲಿ ಪಡೆದಿದ್ದಾರೆ. ಅಲ್ಲದೆ ಇತ್ತೀಚೆಗೆ ತೋಂಟದಾರ್ಯ ಸಿದ್ದಲಿಂಗ ಶ್ರೀಗಳನ್ನು ಹಾಗೂ ಪೂಜ್ಯ ಮಾತಾಜಿ ಅವರನ್ನು ಕಳೆದುಕೊಂಡಿರುವ ಲಿಂಗಾಯತ ಸಮಾಜ ದುಃಖದಲ್ಲಿದೆ. ಇಂತಹ ಸಂದರ್ಭದಲ್ಲಿ ನಿಜಗುಣಪ್ರಭು ಶ್ರೀಗಳಿಗೆ ಪದೆ ಪದೆ ಜೀವ ಬೆದರಿಕೆಯ ಕರೆಗಳು ಹಾಗೂ ಅನಾಮಧೇಯ ಪತ್ರಗಳು ಬರುತ್ತಿರುವದು ಆತಂಕ ಮೂಡಿಸಿದೆ. ಶ್ರೀಗಳಿಗೆ ಬೆದರಿಕೆ ಒಡ್ಡುತ್ತಿರುವ ಮತಾಂಧರನ್ನು ಬಂಧಿಸಬೇಕು. ಶ್ರೀಗಳಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಬಸವ ದಳದ ಕೆ. ಬಸವರಾಜಪ್ಪ ಮಾತನಾಡಿ, ಬಸವ ಧರ್ಮದ ವೈಚಾರಿಕ ಚಿಂತನೆಗಳನ್ನು ಅರಗಿಸಿಕೊಳ್ಳದ ಮತಾಂಧರನ್ನು ತಕ್ಷಣ ಬಂಧಿಬೇಕು. ಮುಂದಾಗಬಹುದಾದ ಅನಾಹುತವನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಮಾತನಾಡಿ, ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು 21 ನೇ ಶತಮಾನದಲ್ಲಿ ಬಸವ ಧರ್ಮದ ಬಹುದೊಡ್ಡ ಆಸ್ತಿ. ಆ ಅಮೂಲ್ಯ ಆಸ್ತಿಯ ಒಂದು ಕೂದಳೆಗೂ ಧಕ್ಕೆ ಯಾದರೆ, ಪರಿಸ್ಥಿತಿ ನೆಟ್ಟಗಿರಲ್ಲ. ತಕ್ಷಣ ರಾಜ್ಯ ಸರಕಾರವು ಶ್ರೀಗಳಿಗೆ ರಾಜ ಮರ್ಯಾದೆಯ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು. ಬೆದರಿಕೆಗಳಿಂದ ಬಸವಾಧಿ ಶರಣರ ವೈಚಾರಿಕ ಚಿಂತನೆಗಳ ಪ್ರಚಾರ ಹಾಗೂ ಪ್ರತಿಪಾದನೆ ನಿಲ್ಲುವದಿಲ್ಲ ಎಂಬುದನ್ನು ಬಸವ ವಿರೋಧಿಗಳು ಬೇಗ ಅರ್ಥ ಮಾಡಿಕೊಳ್ಳಬೇಕು ಎಂದರು.
ಅಶೋಕ ಮಳಲಿ, ಅಡಿವೆಪ್ಪ ಬೆಂಡಿಗೇರಿ, ಎಸ್.ಜಿ.ಸಿದ್ನಾಳ, ರಾಜು ಕುಂಡಗೋಳ, ಕಾಶಪ್ಪ ಉಪ್ಪಿನ, ವಿ.ಕೆ.ಪಾಟೀಲ, ರಾಜು ಮಗದುಮ್ಮ, ಕೆ. ಶರಣಪ್ರಸಾದ, ಆನಂದ ಗುಡಸ್, ಪ್ರಭು ಬೆಣ್ಣಿ, ಸಿದ್ರಾಮ ಸಾವಳಗಿ, ಮಹಾಂತೇಶ ದೀವಟಗಿ, ಬಿ.ಪಿ.ಜವಣಿ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ

  ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?

    ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …

ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ

  ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …

ರಾಣಿ ಚನ್ನವೀರಮ್ಮ

  ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …

ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ

  ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …

ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

  ~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!