Breaking News
Home / featured / ನಾಗನೂರಿನ ಚೌಡಪ್ಪನಾಯ್ಕ ಜಿಡ್ಡಿಮನಿಗೆ ಚಿನ್ನದ ಪದಕ

ನಾಗನೂರಿನ ಚೌಡಪ್ಪನಾಯ್ಕ ಜಿಡ್ಡಿಮನಿಗೆ ಚಿನ್ನದ ಪದಕ

ಮಾರ್ಚ ೨೩ ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರಧಾನ

ನೇಗಿನಹಾಳ : ಕರ್ನಾಟಕ ಸರಕಾರ ಅರಣ್ಯ ಇಲಾಖೆಯ ಮುಂಚೂಣಿ ಹಾಗೂ ಅಗ್ರಗಣ್ಯ ಸಾಧನೆಗೈದ ಆಯ್ದ ಸಿಬ್ಬಂದಿಗಳಿಗೆ ಅರಣ್ಯ ರಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಚಿನ್ನದ ಫಲಕ ನೀಡುವ ಮೂಲಕ ಗೌರವ ನೀಡಲಾಗುತ್ತದೆ. ೨೦೧೯-೨೦೨೦ ನೇ ಸಾಲಿನಲ್ಲಿ ಬೈಲಹೊಂಗಲ ತಾಲೂಕಿನ ನಾಗನೂರ ಗ್ರಾಮದ ಚೌಡಪ್ಪನಾಯ್ಕ ವೀ ಜಿಡ್ಡಿಮನಿ ಅವರ ಸಾಧನೆಗಳನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಇದೇ ತಿಂಗಳು ಮಾರ್ಚ ೨೩ ರಂದು ಬೆಂಗಳೂರು ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರಿಂದ ಚಿನ್ನದ ಪದಕ ಸ್ವೀಕರಿಸಲಿದ್ದಾರೆ.

ಸಮೀಪದ ನಾಗನೂರ ಗ್ರಾಮದಲ್ಲಿ ಜನಿಸಿದ ಚೌಡಪ್ಪನಾಯ್ಕ ವೀರನಾಯ್ಕ ಜಿಡ್ಡಿಮನಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ರುದ್ರಾಕ್ಷಿಮಠದ ಶಿವಬಸವ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲೆ, ಶ್ರೀ ಶಿವಯೋಗಿಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಇಂಚಲ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಪಡೆದಿದ್ದಾರೆ. ಇವರು ೨೦೧೨ರಲ್ಲಿ ಅರಣ್ಯ ರಕ್ಷಕನಾಗಿ ನೇಮಕಗೊಂಡು ಸದ್ಯ ಕೊಡಗು ಜಿಲ್ಲೆಯ ಅರಣ್ಯ ವೃತ್ತದ ವಿರಾಜಪೇಟೆ ವಿಭಾಗ ಪೊನ್ನಂಪೇಟೆ ಅರಣ್ಯ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಶಸ್ತಿ ದೊರೆಯಲು ಪ್ರಮುಖ ಕರ್ತವ್ಯ ನಿರತ ಸಾಧನೆಗಳು

* ಒಟ್ಟು ೪೧ ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಿ ಅರಣ್ಯ ಮೊಕದ್ದಮೆ ದಾಖಲಿಸಿರುತ್ತಾರೆ. ಹಾಗೂ ೭ಅರಣ್ಯ ಪ್ರಕರಣಗಳಲ್ಲಿ ವಾಹನ ಸಮೇತ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.
* ಕಾಡಾನೆ ಮಾನವ ಸಂಘರ್ಷ ತಡೆಯುವಲ್ಲಿ ಹಾಗೂ ರೈತರಿಗೆ ಕೃಷಿ ನಷ್ಟ ಪರಿಹಾರ ಒದಗಿಸಿಕೊಡುವಲ್ಲಿ ಹೆಚ್ಚು ಕಾಳಜಿ ವಹಿಸಿ ಕಾರ್ಯನಿರ್ವಹಿಸಿ ಸರಕಾರದ ಗಮನ ಸೆಳೆದರು.
* ೨೦೧೯ರಲ್ಲಿ ಪೊನ್ನಂಪೇಟೆ ಅರಣ್ಯ ವಲಯದಲ್ಲಿ ಅಕ್ರಮವಾಗಿ ಶ್ರೀಗಂಧ ತುಂಡುಗಳನ್ನು ಕಡಿದು ಸಾಗಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಿರುವುದನ್ನು ಗುರುತಿಸಿ ಪ್ರಮುಖ ೫ ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದರು.
* ಅರಣ್ಯ ನೆಡುತೋಪುಗಳ ಮೋಜಣಿ ಮಾಡಿ ನಕಾಶೆ ತಯಾರಿಸಿರುವುದು ಮತ್ತು
ಮತ್ತು ಇನ್ನಿತರ ವಿಶೇಷ ಕಾರ್ಯಗಳನ್ನು ಗುರುತಿಸಿ ಇವರಿಗೆ ೨೦೧೯ರ ಸಾಲಿನಲ್ಲಿ ಬಿ ಮಾರಪ್ಪ ಟ್ರಸ್ಟ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಬಿ ಮಾರಪ್ಪ” ರಾಜ್ಯ ಪ್ರಶಸ್ತಿ ಪಡೆದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!