Breaking News
Home / featured / ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ

ಉದಯಕುಮಾರ ಕರಜಗಿಮಠ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ

ಗೋಕಾಕ : ಕರ್ನಾಟಕದಲ್ಲಿ ಲಿಂಗಾಯತ ಸಮುದಾಯಕ್ಕೆ ಈಗಾಗಲೇ ರಾಜ್ಯ ಸರ್ಕಾರದಿಂದ ಅಲ್ಪ ಸಂಖ್ಯಾತ ಧರ್ಮ ವೆಂದು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಲಾಗಿದೆ. ಲಿಂಗಾಯತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ” ಲಿಂಗಾಯತ ಅಭಿವೃದ್ಧಿ ನಿಗಮ “ಸ್ಥಾಪನೆ ಮಾಡುವ ಮುಖಾಂತರ ಅಖಂಡ ಲಿಂಗಾಯತ ಸಮುದಾಯದ ಬೇಡಿಕೆಯನ್ನು ಈಡೇರಿಸಿದಂತಾಗುತ್ತದೆ ಎಂದು ಲಿಂಗಾಯತ ಹೋರಾಟಗಾರ ಉದಯಕುಮಾರ ಕರಜಗಿಮಠ ಗೋಕಾಕ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯವು ಅಲ್ಪ ಸಂಖ್ಯಾತರೆಂದು ಪರಿಗಣಿಸಿ ಮೀಸಲಾತಿ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿರುವ ಅಖಂಡ ಲಿಂಗಾಯತ ಸಮುದಾಯಕ್ಕೆ ಇಲ್ಲಿಯ ಸರ್ಕಾರವು ಯವುದೇ ಆದ್ಯತೆ ನೀಡದೆ ವಂಚಿಸುತ್ತಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದಲ್ಲಿ ನೂರಾರು ಒಳಪಂಗಡಗಲ್ಲಿದ್ದು ನಮ್ಮ ಸಮಾಜದ ಯುವಕರು ಉದ್ಯೋಗವಿಲ್ಲದೇ ಸರಿಯಾದ ಶಿಕ್ಷಣವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಡಜನತೆಗೆ ಸರ್ಕಾರದ ಯೋಜನೆಗಳು ಸರಿಯಾಗಿ ಸಿಗದೇ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ರಾಜ್ಯದಲ್ಲಿ ಅಖಂಡ ಲಿಂಗಾಯತ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಮಾನ್ಯ ಮುಖ್ಯ ಮಂತ್ರಿ ಯಡಿಯೂರಪ್ಪನವರು ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿನೆ ಮಾಡಿ ಉದ್ಯೋಗ ಮತ್ತು ಶಿಕ್ಷಣ ಹಾಗೂ ಇತರೆ ಸೌಲಭ್ಯಕ್ಕಾಗಿ ಮೀಸಲಾತಿಯನ್ನು ನೀಡುವಂತೆ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕು. ಇಲ್ಲವಾದರೆ ಅಖಂಡ ಲಿಂಗಾಯತ ಸಮಾಜದ ಜನರೊಂದಿಗೆ ಸೇರಿ ರಾಜ್ಯಾದ್ಯಂತ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗುತ್ತೆದೆ ಎಂದು ತಿಳಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!