Breaking News
Home / featured / ಬ್ರಿಟನ್ ರಾಜಕುಮಾರ ಚಾರ್ಲ್ಸ್ ಗೆ ಕೊರೊನಾ ವೈರಸ್

ಬ್ರಿಟನ್ ರಾಜಕುಮಾರ ಚಾರ್ಲ್ಸ್ ಗೆ ಕೊರೊನಾ ವೈರಸ್

ಲಂಡನ್ : ಬ್ರಿಟನ್ ಅರಸೊತ್ತಿಗೆಯ ಉತ್ತರಾಧಿಕಾರಿ ಬ್ರಿಟನ್ ರಾಜಕುಮಾರ ಚಾರ್ಲ್ಸ್ ಗೆ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಅರಮನೆಯ ಮೂಲಗಳು ಧೃಡಪಡಿಸಿವೆ.

ಬ್ರಿಟನ್ ಮಹರಾಣಿ ಎಲಿಜಬೆತ್ ಅವರ ಮೊದಲ ಮಗ ಚಾರ್ಲ್ಸ್ ಗೆ ಇಗ 71ವರ್ಷವಾಗಿದ್ದು
ಪ್ರಿನ್ಸ್ ಆಫ್ ವೆಲ್ಸ್ ಅವರಿಗೆ ಕೊರೊನಾ ವೈರಸ್ ಸೊಂಕು ತಗಲಿದ್ದು ರುಜುವಾತು ಆಗಿದ್ದು ಕೋವಿಡ್ 19 ರೋಗ ಲಕ್ಷಣಗಳು ಕಾಣಿಸಿಕೊಂಡಿದೆ. ಉಳಿದಂತೆ ಅವರ ಆರೋಗ್ಯ ಉತ್ತಮವಾಗಿದೆ. ಕಳೆದ ಕೆಲ ದಿನಗಳಿಂದ ಮನೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅರಮನೆಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜಕುಮಾರ ಚಾರ್ಲ್ಸ್ ಅವರ ಪತ್ನಿ ಕ್ಯಾಮಿಲ್ಲಾ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಇತ್ತೀಚಿನ ದಿನಗಳಲ್ಲಿ ರಾಜಕುಮಾರ ಪ್ರೀನ್ಸ್ ಸಾಕಷ್ಟು ಜನರನ್ನು ಬೇಟಿಯಾಗಿದ್ದಾರೆ. ಯಾರಿಂದ ಅವರಿಗೆ ಸೋಂಕು ತಗುಲಿದೆ ಎಂದು ಖಚಿತವಾದ ಮಾಹಿತಿ ದೊರೆತಿಲ್ಲ ಎಂದು ಅರಮನೆಯ ಮೂಲಗಳು ತಿಳಿಸಿವೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!