Breaking News
Home / featured / ಸ್ಪೇನ್ ರಾಜಕುಮಾರಿ ಕೊರೋನ ವೈರಸ್ ಗೆ ಬಲಿ

ಸ್ಪೇನ್ ರಾಜಕುಮಾರಿ ಕೊರೋನ ವೈರಸ್ ಗೆ ಬಲಿ

 

ಮ್ಯಾಡ್ರಿಡ್: ಮಹಾಮಾರಿ ಕೊರೊನ ವೈರಸ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಸ್ಪೇನ್‌ನ ರಾಜಕುಮಾರಿ ಮಾರಿಯಾ ಥೆರೆಸಾ ಅವರನ್ನು ಬಲಿ ಪಡೆದಿದೆ. ಕೊರೊನಾ ಸೋಂಕಿಗೆ ಮಾರಿಯಾ ಸಾವನ್ನಪ್ಪಿರುವ ಬಗ್ಗೆ ಸ್ಪೇನ್ ಅರಮನೆ ಅಧಿಕೃತ ಘೋಷಣೆ ಹೊರಡಿಸಿದೆ.

ಕೊರೊನಾ ವೈರಸ್ ವಿಶ್ವಾದ್ಯಂತ ಬಡವ, ಬಲ್ಲಿದ, ರಾಜಮನೆತನದವರನ್ನೂ ಕಾಡುತ್ತಿದೆ. ಮಾರಿಯಾ ತೆರೆಸಾ ಕೊರೊನಾ ವೈರಾಣುವಿಗೆ ಬಲಿಯಾದ ವಿಶ್ವದ ಮೊದಲ ರಾಜಮನೆತನದ ಮಹಿಳೆಯಾಗಿದ್ದಾರೆ. ಮಾರಿಯಾ ತೆರೆಸಾಗೆ 86 ವರ್ಷ ವಯಸ್ಸಾಗಿತ್ತು. ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ಸಹೋದರ ಪ್ರಿನ್ಸ್ ಸಿಕ್ಟೋ ಎನ್ರಿಕ್ ಡಿ ಬೊರ್ಬನ್ ಮಾಹಿತಿ ನೀಡಿದ್ದಾರೆ.

ಮಾರಿಯಾ ಸ್ಪೇನ್ ರಾಜಮನೆತನದ ಹೌಸ್ ಆಫ್ ಬೌರ್ಬನ್-ಪಾರ್ಮಾದ ಸದಸ್ಯೆಯಾಗಿದ್ದರು. 1933ರಲ್ಲಿ ಪ್ಯಾರಿಸ್‍ನಲ್ಲಿ ಜನಿಸಿದ್ದ ಮಾರಿಯಾ ಥೆರೇಸಾ ಫ್ರಾನ್ಸ್ ನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಬಳಿಕ ಪ್ಯಾರಿಸ್‍ನ ಸೊರ್ಬೊನ್‍ನಲ್ಲಿ ಹಾಗೂ ಮ್ಯಾಡ್ರಿಡ್‍ನ ಕಾಂಪ್ಲುಟೆನ್ಸ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು.

ಈ ನಡುವೆ ಕೊರೊನಾ ವೈರಸ್‍ಗೆ ಸ್ಪೇನ್‍ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 5,982ಕ್ಕೆ ಏರಿದೆ. ಇದು ಚೀನಾವನ್ನೂ ಮೀರಿಸಿದೆ. ಸ್ಪೇನ್‍ನಲ್ಲಿ 73,235 ಕೊರೊನಾ ಸೋಂಕಿತ ಪ್ರಕರಣಗಳಿದ್ದು, 54,968 ಜನರು ಚಿಕಿತ್ಸೆ ಪಡೆಯುತ್ತಿದ್ದು, 12,285 ಜನರು ಗುಣಮುಖರಾಗಿದ್ದಾರೆ. ಇದರಿಂದಾಗಿ ತುರ್ತು ಪರಿಸ್ಥಿತಿಯನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಲು ಸ್ಪೇನ್ ಸಂಸತ್ತು ನಿರ್ಧರಿಸಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!