Breaking News
Home / featured / ಏಪ್ರೀಲ್ 14 ರ ನಂತರ ಲಾಕ್‌ಡೌನ್ ವಿಸ್ತರಣೆ ಇಲ್ಲ: ಕೇಂದ್ರ ಸ್ಪಷ್ಟನೆ

ಏಪ್ರೀಲ್ 14 ರ ನಂತರ ಲಾಕ್‌ಡೌನ್ ವಿಸ್ತರಣೆ ಇಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ 21 ದಿನಗಳ ಕಾಲ ಅಂದರೆ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ನಡುವೆ ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ. 

ಈ ಕುರಿತು ಮಾಹಿತಿ ನೀಡಿದ ರಾಜೀವ್ ಗೌಬಾ, ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ. ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಎಂದಿದ್ದಾರೆ.

ಲಾಕ್​ಡೌನ್​ ಅವಧಿ ಏಪ್ರಿಲ್​ 14ರ ನಂತರವೂ ಮುಂದುವರಿಯಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದರಿಂದಾಗಿ ದೇಶದ ಜನತೆ ಇನ್ನಷ್ಟು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸಾರ್ಕಾರ ಸುಳ್ಳು ಸುದ್ದಿಗಳಿಗೆ ತೆರೆ ಎಳೆದಿದ್ದು, ಏ.14 ರ ನಂತರ ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

Leave a Reply

Your email address will not be published. Required fields are marked *

error: Content is protected !!