Breaking News
Home / featured / ಕೊರೊನಾ ಎಪೆಕ್ಟ್; ಎಣ್ಣೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ 13 ಜನ ಆತ್ಮಹತ್ಯೆಗೆ ಶರಣು

ಕೊರೊನಾ ಎಪೆಕ್ಟ್; ಎಣ್ಣೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ 13 ಜನ ಆತ್ಮಹತ್ಯೆಗೆ ಶರಣು

ಬೆಂಗಳೂರು: ಲಾಕ್ ಡೌನ್ ನಿಂದ ರಾಜ್ಯದಲ್ಲಿ ಅದೆಷ್ಟೊ ಜನರು ಹಸಿವಿನಿಂದ ಹೊತ್ತಿನ ಊಟಕ್ಕೂ ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಲವರಿಗೆ ಮಹಾಮಾರಿ ಕೊರೊನಾ ಬಾರದಂತೆ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ ಎಂಬ ಆತಂಕ ಇದ್ದರೆ, ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ ಕುಡಿಯೋದು ಹೇಗೆ ಎಂಬ ಚಿಂತೆಯಾಗಿದೆ. 

ಲಾಕ್ ಡೌನ್ ನಿಂದ ಮದ್ಯದಂಗಡಿಗಳು ಬಂದ್ ಇರುವುದರಿಂದ ಕುಡುಕರಿಗೆ ಎಣ್ಣೆ ಸಿಗದೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೂವರು ಕೊರೊನಾ ವೈರಸ್ ನಿಂದ ಈಗಾಗಲೇ ಸಾವನ್ನಪ್ಪಿದ್ದಾರೆ. ಈ ನಡುವೆ ಲಾಕ್‍ಡೌನ್ ನಿಂದ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಜಿಲ್ಲೆ ಒಂದರಲ್ಲೇ ಆರು ಮಂದಿ ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಹುಬ್ಬಳ್ಳಿ ಮತ್ತು ಬೀದರ್ ನಲ್ಲಿ ತಲಾ ಒಬ್ಬೊಬ್ಬರು ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. ಮುಳಬಾಗಿಲಿನ ಮುದಿಗೆರೆ ಮತ್ತು ತುಮಕೂರಿನಲ್ಲಿ ತಲಾ ಒಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ.

ರಾಜ್ಯದ ಸ್ಥಿತಿ ಹೀಗಿದ್ದರೆ ಇನ್ನು ಕೇರಳದಲ್ಲಿ ಕುಡುಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್, ವೈದ್ಯರ ಚೀಟಿ ತಂದರೆ ಮದ್ಯ ವಿತರಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!