Breaking News
Home / featured / 1 ರಿಂದ 9ನೇ ತರಗತಿಗಳಿಗೆ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ

1 ರಿಂದ 9ನೇ ತರಗತಿಗಳಿಗೆ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ

ಬೆಂಗಳೂರು: ಕಳೆದ ಹಲವು ದಿನಗಳಿಂದ ವಿಧ್ಯಾರ್ಥಿಗಳಲ್ಲಿ ಇದ್ದ ಪರೀಕ್ಷೆ ಗೊಂದಲಕ್ಕೆ ಶಿಕ್ಷಣ ಸಚಿವ ಸುರೇಶ ಕುಮಾರ ತೆರೆ ಎಳೆದಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1 ರಿಂದ 9ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದಿದ್ದಾರೆ. ಹಾಗೆಯೇ 11ನೇ ತರಗತಿಗೆ ಕೂಡ ಈ ಬಾರಿ ಪರೀಕ್ಷೆ ಇಲ್ಲ. ಇವರೆಲ್ಲ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಅರ್ಹರಾಗುತ್ತಾರೆ.

ಆದರೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಶೀಘ್ರದಲ್ಲಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಏಪ್ರಿಲ್ 14ರಂದು ಲಾಕ್ ಡೌನ್ ಮುಗಿಯುತ್ತಿದ್ದಂತೆ ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!