Breaking News
Home / featured / ಬೆಳಗಾವಿಯ ಮೂವರಲ್ಲಿ ಕೊರೊನಾ ಪಾಸಿಟಿವ್

ಬೆಳಗಾವಿಯ ಮೂವರಲ್ಲಿ ಕೊರೊನಾ ಪಾಸಿಟಿವ್

ಬೆಳಗಾವಿ/ಧಾರವಾಡ:  ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ  ಸೊಂಕು ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಮೂವರಿಗೆ ಕೊರೊನ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಸಚಿವ ಜಗದೀಶ ಶೆಟ್ಟರ್, ದೆಹಲಿಯ ನಿಜಾಮುದ್ದೀನ್ ಸಭೆಯಲ್ಲಿ ಭಾಗವಹಿಸಿ ಬೆಳಾಗಾವಿಗೆ ಆಗಮಿಸಿದ್ದ ಮೂವರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತರು ಮೂರರಿಂದ ನಾಲ್ಕು ದಿನ ಪ್ರಾರ್ಥನೆಯಲ್ಲೂ ಭಾಗಿಯಾಗಿದ್ದರು ಎಂದು ತಿಳಿಸಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸೊಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರು ಇರುವ ಸ್ಥಳವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಗಳಲ್ಲಿ ಯಾರೂ ಕೂಡ ಮನೆಯಿಂದ ಹೊರಬರದಂತೆ ಘೋಷಣೆ ಮಾಡಲಾಗುತ್ತಿದೆ. ಇನ್ನು ನಗರ ಹಾಗೂ ತಾಲೂಕಿನಾದ್ಯಂತ ಮನೆಗಳಿಗೆ ಔಷಧ ಸಿಂಪಡಣೆ ಮಾಡಲಾಗುತ್ತಿದ್ದು, ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗುತ್ತಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!