Breaking News
Home / featured / ಚಿತ್ರ ನಟ ಬುಲೆಟ್ ಪ್ರಕಾಶ ನಿಧನ

ಚಿತ್ರ ನಟ ಬುಲೆಟ್ ಪ್ರಕಾಶ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು.ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬುಲೆಟ್ ಪ್ರಕಾಶ್ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಬುಲೆಟ್ ಪ್ರಕಾಶ 300ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪಾರ್ಥ, ದ್ರುವ, ಅಂಬಿ, ಓಂಕಾರ, ಮಾಸ್ತ್ ಮಜಾ ಮಾಡಿ, ಐತಲಕ್ಕಡಿ, ಜಾಕಿ, ಮಲ್ಲಿಕಾರ್ಜುನ, ದೆವ್ರಾಣೆ, ರಜಿನಿ ಕಾಂತ, ಪಾರಾರಿ, ಜಟಾಯು, ಜಂಗಲ್ ಜಾಕಿ ,ಸವಾಲ್ , ಲವ್ ಶೋ, ನಿಂಬೆ ಹುಳಿ, ಪುಂಗಿ ದಾಸ, ರೋಜ್, ಆರ್ಯನ್, ಮಾಸ್ಟರ್ ಮೈಂಡ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.

 

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಡೊಂಗಿ ಮಂತ್ರವಾದಿ ಲಪಟಾಯಿಸಿದ್ದು 6 ಕೋಟಿ

  ಬೆಳಗಾವಿ: ಖ್ಯಾತ ಸಂಗೀತ ಸಂಯೋಜಕ ಕೆ.ಕಲ್ಯಾಣ ಅವರ ದಾಂಪತ್ಯ ವಿವಾದ ಹೊಸ ತಿರುವು ಪಡೆದುಕೊಂಡಿದ್ದು, ಡೊಂಗಿ ಮಂತ್ರವಾದಿ ಲಪಟಾಯಿಸಿದ …

Leave a Reply

Your email address will not be published. Required fields are marked *

error: Content is protected !!