Breaking News
Home / featured / ಅಕ್ಕಮಹಾದೇವಿ ಜಯಂತಿ ಮನೆಯಲ್ಲೇ ಆಚರಿಸಿರಿ- ಭಾಲ್ಕಿಶ್ರೀ

ಅಕ್ಕಮಹಾದೇವಿ ಜಯಂತಿ ಮನೆಯಲ್ಲೇ ಆಚರಿಸಿರಿ- ಭಾಲ್ಕಿಶ್ರೀ

ಭಾಲ್ಕಿ: ದೇಶದ ಮೊದಲ ಕವಯಿತ್ರಿ ಎಂದೇ ಖ್ಯಾತರಾದ ವೀರವೈರಾಗ್ಯನಿಧಿ ಅಕ್ಕಮಹಾದೇವಿ ಅವರು ಬಸವಾದಿ ಶರಣರ ಸಮಕಾಲೀನರಲ್ಲಿ ಒಬ್ಬರು. ಚನ್ನಮಲ್ಲಿಕಾರ್ಜುನ ಅಂಕಿತದಲ್ಲಿ ಇವರ 400 ಕ್ಕೂ ಹೆಚ್ಚಿನ ವಚನಗಳು ದೊರೆತಿವೆ. ಅವರ ಆಧ್ಯಾತ್ಮ ಜೀವನ ಇಡೀ ಸ್ತ್ರೀಕುಲಕ್ಕೆ ಗೌರವ ತರುವ ರೀತಿಯಲ್ಲಿ ಸಾಗಿದ್ದು ಕಾಣುತ್ತೇವೆ. ಅವರ ಜಯಂತಿ ಪ್ರತಿವರ್ಷ ಸಾರ್ವಜನಿಕವಾಗಿ ಆಚರಿಸಲಾಗುತ್ತಿತ್ತು.
ಈಗ ದೇಶದಾದ್ಯಂತ ಕೊರೊನಾ ವೈರಸ್‍ದಿಂದಾಗಿ ಲಾಕ್‍ಡೌನ್ ಆಗಿರುವುದರಿಂದ ಮನೆಯಿಂದ ಯಾರೂ ಹೊರಗೆ ಬರುವಂತಿಲ್ಲ. ಆದ್ದರಿಂದ ಕಲ್ಯಾಣಕರ್ನಾಟಕ ಭಾಗದ ಎಲ್ಲ ಶರಣಬಂಧುಗಳು ಅಕ್ಕಮಹಾದೇವಿ ಜಯಂತಿ ಯನ್ನು ತಮ್ಮ ತಮ್ಮ ಮನೆಯಲ್ಲೇ ನಾಳೆ(ಎಪ್ರೀಲ್ 8) ಬೆಳಿಗ್ಗೆ 8:00 ಗಂಟೆಗೆ ಎಲ್ಲರೂ ಲಿಂಗಪೂಜೆ ಮಾಡಿಕೊಂಡು, ಅಕ್ಕಮಹಾದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಚನ ಪಠಣ ಮಾಡಿ, ತೊಟ್ಟಿಲು ಕಾರ್ಯಕ್ರಮ ಮಾಡುವ ಮೂಲಕ ಸರಳವಾಗಿ ಆಚರಿಸಬೇಕೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

Leave a Reply

Your email address will not be published. Required fields are marked *

error: Content is protected !!