Breaking News
Home / featured / ಲಾಕ್‌ಡೌನ್ ಅವಧಿ ವಿಸ್ತರಣೆ: ಸಿಎಂ ಬಿಎಸ್‌ವೈ

ಲಾಕ್‌ಡೌನ್ ಅವಧಿ ವಿಸ್ತರಣೆ: ಸಿಎಂ ಬಿಎಸ್‌ವೈ

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಏ. 14ರ ವರೆಗೆ ಇರುವ  ಲಾಕ್‌ಡೌನ್ ಅವಧಿಯನ್ನು ಏ.30 ರವರೆಗೆ ವಿಸ್ತರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಲಾಕ್‌ಡೌನ್ ಸಡಿಲಿಸಬಾರದು. ಲಾಕ್ ಡೌನ್ ಮುಂದುವರೆಸಬೇಕು ಎಂದು ಸಲಹೆಗಳು ಬಂದಿದ್ದು, ಏ.30ರವರೆಗೆ ಲಾಕ್ ಡೌನ್ ಮುಂದುವರೆಸುವುದು ಅನಿವಾರ್ಯವಾಗಿದೆ. ಮುಂದಿನ 2-3 ವಾರಗಳು ದೇಶಕ್ಕೆ ಕಠಿಣ ಪರಿಸ್ಥಿತಿ ಇರುವುದರಿಂದ ಮುಂದಿನ ಏ.14ರ ಬಳಿಕ ವಿಸ್ತಾರಗೊಳ್ಳುವ ಲಾಕ್‌ಡೌನ್ ವಿಭಿನ್ನವಾಗಿರಲಿದೆ. ಕಟ್ಟುನಿಟ್ಟಾಗಿ ಲಾಕ್‌ಡೌನ್ ಜಾರಿಗೆ ತರುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದರು.

2.84 ಲಕ್ಷ ಪಿಪಿಇ ಕಿಟ್ ಗಳನ್ನು ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಿಟ್ ಗಳನ್ನು ಪೂರೈಸಲಾಗುವುದು. ಲ್ಯಾಬ್‌ಗಳ ಸಂಖ್ಯೆ 220ಕ್ಕೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಬೆಳಿಗ್ಗೆಯಿಂದ ಈವರೆಗೆ 7 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ತಬ್ಲಿಕ್ ಜಮಾತ್ ನ 50 ಜನರನ್ನು ಗುರುತಿಸಲಾಗಿದೆ. ವೈದ್ಯಕೀಯ ಸಿಬ್ಬಂದಿಗಳ ಜತೆ ಅನುಚಿತ ವರ್ತನೆ ಸಹಿಸಲ್ಲ ಎಂದು ಎಚ್ಚರಿಸಿದರು.

ಲಾಕ್ ಡೌನ್ ನಿಂದಾಗಿ ಅರ್ಥ ವ್ಯವಸ್ಥೆ ಸಂಪೂರ್ಣ ಕುಸಿದಿರುವ ಹಿನ್ನಲೆಯಲ್ಲಿ ಆರ್ಥಿಕತೆಗೆ ಕೊಂಚ ಚೇತರಿಕೆ ತರುವ ನಿಟ್ಟಿನಲ್ಲಿ ಭಾಗಶ: ಸರ್ಕಾರಿ ಕಚೇರಿಗಳನ್ನು ನಡೆಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

Leave a Reply

Your email address will not be published. Required fields are marked *

error: Content is protected !!