Breaking News
Home / featured / ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡನೀಯ

ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡನೀಯ

ಮೂಡಲಗಿ: ಲಾಕ್‌ಡೌನ್‌ ಜಾರಿಯಿಂದಾಗಿ ಆತಂಕಕ್ಕೊಳಗಾಗಿರುವ ಜನರ ಅನಿವಾರ್ಯತೆಯನ್ನು ದುರುಪಯೋಗ ಮಾಡಿಕೊಂಡಿರುವ ಅನೇಕ ವ್ಯಾಪಾರಿಗಳು, ದಿನಸಿ ವಸ್ತುಗಳು, ತರಕಾರಿ ಇತ್ಯಾದಿ ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವ ಮೂಲಕ ಸುಲಿಗೆಗೆ ಇಳಿದಿದ್ದಾರೆ.

ಮೂಡಲಗಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಿರಾಣಿ ಅಂಗಡಿ ಮಾಲಿಕರು, ತರಕಾರಿ ವ್ಯಾಪಾರಸ್ತರು ದಿನಬಳಕೆ ವಸ್ತುಗಳ ಬೆಲೆಗಳನ್ನು ಸಾಮಾನ್ಯ ದರಗಳಿಗಿಂತ ಹೆಚ್ಚು ವಿದಿಸಿರುವುದರಿಂದ ರೈತರು, ಕೂಲಿ ಕಾರ್ಮಿಕರು ಮತ್ತು ಬಡವರು ತೊಂದರೆ ಅನುಭವಿಸುತ್ತಿದ್ದಾರೆ.

ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ವ್ಯಾಪಾರಸ್ಥರನ್ನು, ತಕ್ಷಣವೇ ತಾಲೂಕಾಡಳಿತ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆ ಸೇರಿಸಿ ಸಮಸ್ಯೆ ಬಗೆಹರಿಸಬೇಕೆಂದು ಅವರಾದಿಯ ಯುವ ಮುಖಂಡ ಪ್ರಕಾಶ ಕಾಳಶೆಟ್ಟಿ, ಹಾಗೂ ಸುತ್ತಲಿನ ಗ್ರಾಮದ ಯುವಕರು ಒತ್ತಾಯಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!