Breaking News
Home / featured / ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ ಮಾರಾಟ: ಸಚಿವ ರಮೇಶ ಜಾರಕಿಹೊಳಿ

ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ ಮಾರಾಟ: ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಮದ್ಯದ ಅಂಗಡಿಗಳ ಮಾಲೀಕರೇ  ಹೆಚ್ಚಿನ ಲಾಭಕ್ಕಾಗಿ ಮದ್ಯವನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನಲೆಯಲ್ಲಿ ಹೆಚ್ಚಿನ ಲಾಭಕ್ಕಾಗಿ ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಮದ್ಯದ ಅಂಗಡಿ ಆರಂಭ ಮಾಡದಂತೆ ಸಿಎಂ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದೇನೆ. ಅದಕ್ಕೆ ಸಿಎಂ ಕೂಡ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!