Breaking News
Home / featured / “ನಮ್ಮ ಧ್ವನಿ” ಸಂಸ್ಥಾಪಕ ಮಹೇಂದ್ರಕುಮಾರ ವಿಧಿವಶ

“ನಮ್ಮ ಧ್ವನಿ” ಸಂಸ್ಥಾಪಕ ಮಹೇಂದ್ರಕುಮಾರ ವಿಧಿವಶ

ಬೆಂಗಳೂರು – ‘ನಮ್ಮ ಧ್ವನಿ’ ಸಂಘಟನೆಯ ಸಂಸ್ಥಾಪಕ, ಬಜರಂಗದಳದ ಮಾಜಿ ಮುಖಂಡ, ಸಾಮಾಜಿಕ ಕಾರ್ಯಕರ್ತ ಮಹೇಂದ್ರಕುಮಾರ ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.

ತೀವ್ರ ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರು ವಾಸಿಯಾಗಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಬಜರಂಗದಳದ ಮೂಲಕ ತಮ್ಮ ಸಾಮಾಜಿಕ ಜೀವನ ಆರಂಭಿಸಿದ್ದ ಮಹೇಂದ್ರ ಕುಮಾರ್ ನಂತರ ಕೆಲವು ವಿವಾದದಿಂದಾಗಿ ಸಂಘಟನೆಯನ್ನು ಬಿಟ್ಟು ಸರ್ವಧರ್ಮ ಸೌಹಾರ್ದ, ಸಾಮಾರಸ್ಯದ ಕುರಿತು ಕೆಲಸ ಮಾಡುತ್ತಿದ್ದರು. ಹಲವಾರು ಹೋರಾಟಗಳಲ್ಲಿ ಭಾಗಿಯಾಗಿ ಜನಮನ್ನನೇ ಗಳಿಸಿದ್ದರು.

ಬಜರಂಗದಳದ ರಾಜ್ಯ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದ ಅವರು ಆ ಸಂದರ್ಭದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದರು..

ಜನಪರ ಹೋರಾಟಗಳನ್ನು ಮುಂದುವರಿಸಿದ್ದ ಅವರು, “ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿ, ಅದೇ ಹೆಸರಿನ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!