Breaking News
Home / featured / ಸದ್ಯಕ್ಕೆ ಮದ್ಯದಂಗಡಿ ತೆರೆಯುವ ಯೋಜನೆ ಇಲ್ಲ : ಕಂದಾಯ ಸಚಿವ

ಸದ್ಯಕ್ಕೆ ಮದ್ಯದಂಗಡಿ ತೆರೆಯುವ ಯೋಜನೆ ಇಲ್ಲ : ಕಂದಾಯ ಸಚಿವ

ಬೆಂಗಳೂರು: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ , ಮದ್ಯದ ಅಂಗಡಿ ತೆರೆಯಲು ಸಧ್ಯಕ್ಕೆ ಅನುಮತಿ ಇಲ್ಲ. ಎಣ್ಣೆ ನಮ್ಮದಲ್ಲ, ಊಟ ಮಾತ್ರ ನಮ್ಮದು. ಎಣ್ಣೆ ನಿಮ್ಮದು, ಊಟ ನಮ್ಮದು. ಸದ್ಯಕ್ಕೆ ಎಣ್ಣೆ ಬೇಡವೇ ಬೇಡ. ಎಣ್ಣೆ ಸಹವಾಸ ಹೆಂಡತಿ ಮಕ್ಕಳು ಉಪವಾಸ ಅಷ್ಟೇ ಆಗೋದು. ಈಗ ಏನದರೂ ನಾವು ಮದ್ಯದಂಗಡಿ ತೆರೆದರೆ ಕೊಟ್ಟಿರೋ ರೇಷನ್ ಎಲ್ಲಾ ಹೋಗಿಬಿಡುತ್ತೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಮದ್ಯದ ವಿಚಾರ ಬೇಡ ಎಂದರು.

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಆರ್ಥಿಕ ಸಂಕಷ್ಟ ಹೆಚ್ಚಾಗಿದ್ದು, ಈ ನಡುವೆ ಮದ್ಯದಂಗಡಿ ತೆರೆಯುವಂತೆ ಕೆಲ ಸಚಿವರು ಬೇಡಿಕೆ ಇಟ್ಟಿದ್ದಾರೆ. ಮದ್ಯ ವ್ಯಸನಕ್ಕೆ ಅಡಿಕ್ಟ್ ಆಗಿರುವ ಹಲವರೂ ಕೂಡ ಸರ್ಕಾರಕ್ಕೆ ಇದೇ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್ ಅಶೋಕ್, ಸಧ್ಯಕ್ಕೆ ಮದ್ಯದಂಗಡಿ ತೆರೆಯುವ ಯಾವುದೇ ಯೋಜನೆ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೂಡ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿರುವ ಹಸಿರು ವಲಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುವಂತೆ ಚರ್ಚೆಗಳು ನಡೆದಿದೆ. ಕೆಲ ಸಚಿವರು ಕ್ಷೇತ್ರದಲ್ಲಿ ಜನರ ಒತ್ತಡ ಹೆಚ್ಚಾಗಿದ್ದು, ವ್ಯಾಪಾರಿಗಳು ಒತ್ತಡ ತರುತ್ತಿದ್ದಾರೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಮದ್ಯ ಮಾರಾಟಕ್ಕೆ ಅನುಮತಿ ನೀಡಬಹುದು ಎಂದುಸಲಹೆ ನೀಡಿದ್ದರೆ ಇನ್ನು ಕೆಲ ಸಚಿವರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಗಿಯುವವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದಿವೆ.

ಒಟ್ಟಾರೆ ಮೇ 3ರ ವರೆಗೂ ಮದ್ಯದಂಗಡಿ ತೆರೆಯದಂತೆ ಸರ್ಕಾರ ಸೂಚಿಸಿದ್ದು, ಬಳಿಕ ಹೊಸ ಮಾರ್ಗಸೂಚಿಗೆ ಅನ್ವಯವಾಗಿ ನಿರ್ಧಾರ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!