Breaking News
Home / featured / ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಿ : ತೋಂಟದ ಡಾ ಸಿದ್ಧರಾಮ ಶ್ರೀಗಳು

ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಿ : ತೋಂಟದ ಡಾ ಸಿದ್ಧರಾಮ ಶ್ರೀಗಳು

 

ಮದ್ಯಪಾನವ ಮಾಡಿ, ಇದ್ದುದೆಲ್ಲವ ನೀಗಿ
ಬಿದ್ದು ಬರುವವನ ಸದ್ದಡಗಿ | ಸಂತಾನ
ವೆದ್ದು ಹೋಗುವುದು ಸರ್ವಜ್ಞ.

ಗದಗ : ಕೊರೋನಾ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಮದ್ಯಮಾರಾಟಕ್ಕೆ ಕೇಂದ್ರ ಸರಕಾರ ಮತ್ತೆ ಅನುಮತಿ ನೀಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಮದ್ಯಪಾನದಿಂದಾಗುವ ಅನಾಹುತಗಳು ಅಷ್ಟಿಷ್ಟಲ್ಲ. ಮದ್ಯವ್ಯಸನಿಗಳು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿರುತ್ತಾರೆ. ಅವರು ಯಾರ ಮಾತನ್ನೂ ಕೇಳುವುದಿಲ್ಲ. ಎಲ್ಲಿ ಬೇಕಾದಲ್ಲಿ ಬಿದ್ದು, ಹೊರಳಾಡಿ ಬಂದು ಮನೆಮಂದಿಗೆಲ್ಲ ಕೊರೋನಾ ಹಬ್ಬಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸುವರು. ಮದ್ಯವ್ಯಸನಿಗಳಿಂದಾಗಿ ಮೊದಲು ಬೀದಿ ಪಾಲಾಗುತ್ತಿದ್ದ ಕುಟುಂಬಗಳು ಇನ್ನು ಮಸಣದ ಪಾಲಾಗುವ ದಿನಗಳು ದೂರವಿಲ್ಲ ಎನಿಸುತ್ತದೆ. ಕೊರೋನಾದಿಂದಾಗಿ ದುಡಿಯುವ ಕೈಗಳಿಗೆ ಉದ್ಯೋಗವಿಲ್ಲ. ಇದ್ದುದರಲ್ಲಿಯೇ ಸಂಸಾರ ನಿರ್ವಹಣೆ ಮಾಡಬೇಕಾದ ಸಂಕಷ್ಟ ಸ್ಥಿತಿ ಮನೆಯ ಹೆಣ್ಣು ಮಕ್ಕಳಿಗಿರುವಾಗ ಹೊಡೆದು ಬಡೆದು ಇದ್ದುದನ್ನೂ ಕಸಿದುಕೊಂಡು ಹೋದರೆ ಅವರ ಪರಿಸ್ಥಿತಿ ಏನು ಎನ್ನುವುದನ್ನು ಸರಕಾರ ಅರ್ಥಮಾಡಿಕೊಳ್ಳಬೇಕು. ಗಾಂಧಿನಾಡಿನವರೇ ಆದ ಪ್ರಧಾನಿ ಮಾನ್ಯ ನರೇಂದ್ರ ಮೋದಿ ಹಾಗು ಗೃಹಮಂತ್ರಿ ಮಾನ್ಯ ಅಮಿತಷಾ ಅವರಿಂದ ಇಂಥ ಕ್ರಮವನ್ನು ಭಾರತದ ಸಭ್ಯ-ಸುಸಂಸ್ಕೃತ ಸಮಾಜ ನಿರೀಕ್ಷಿಸಿರಲಿಲ್ಲ. ಅವರ ಈ ನಡೆ ದೇಶದ ಬಗ್ಗೆ ಅವರಿಗಿರುವ ಕಾಳಜಿಯನ್ನು ಪ್ರಶ್ನಿಸುವಂತಿದೆ ಎಂದು ಗದಗ-ಡಂಬಳ ಜಗದ್ಗುರು ತೋಂಟದಾರ್ಯಮಠದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸಿದ ಅವರು ಕೇಂದ್ರದ ಈ ನಡೆಯಿಂದ ದೇಶದಲ್ಲಿ ಸಾಂಕ್ರಾಮಿಕ ರೋಗವಾಗಿರುವ ಕೊರೋನಾವನ್ನು ತಡೆಗಟ್ಟುವುದು ಅಸಾಧ್ಯವಾಗುತ್ತದೆ. ಶಿಸ್ತುಬದ್ಧ, ಸಂಯಮದಿಂದ ಕೂಡಿದ ಜೀವನ ಶೈಲಿಯಿಂದ ಮಾತ್ರ ನಾವು ಮಾನವ ಕುಲವನ್ನು ಸಂರಕ್ಷಿಸಬಹುದಾಗಿದೆ. ಇಂದು ಅಮೇರಿಕೆಯಲ್ಲಿ ೬೫ ಸಾವಿರಕ್ಕೂ ಅಧಿಕ ಜನರು ಕೋರೋನಾದಿಂದ ಸಾವಿಗೀಡಾಗಿರುವುದಕ್ಕೆ ಇಂತಹ ವ್ಯಸನಗಳು, ಶಿಸ್ತುಬದ್ಧ ಆರೋಗ್ಯಪೂರ್ಣ ಜೀವನ ಶೈಲಿಯಿಂದ ಜನರು ವಿಮುಖರಾಗಿರುವುದೇ ಮುಖ್ಯಕಾರಣ ಎಂಬುದು ನಮ್ಮ ಪ್ರಧಾನಿಗಳಿಗೆ ತಿಳಿಯದ ವಿಷಯವೇನಲ್ಲ. ಜನರು ದುರ್ವ್ಯಸನಗಳಿಗೆ ಬಲಿಯಾಗುವುದನ್ನು ತಡೆಗಟ್ಟದೆ ಮಾಡುವ ಲಾಕ್‌ಡೌನ್‌ಗಳಿಂದ ಯಾವುದೇ ಪ್ರಯೋಜನವಿಲ್ಲ. ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಗುರಿಮಾಡುತ್ತದೆ ಎಂದು ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಈ ನಡೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಚಲಿತರಾಗಿರಬಹುದು. ಕೋರೋನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ಮದ್ಯಪಾನವನ್ನು ಅವರು ಸಂಪೂರ್ಣವಾಗಿ ನಿಷೇಧಿಸಲೇಬೇಕು. ಇಲ್ಲದಿದ್ದರೆ ಮದ್ಯವ್ಯಸನಿಗಳೇ ಕೊರೋನಾ ವೈರಸ್‌ನ ವಾಹಕದಂತೆ ಕಾರ್ಯಮಾಡುವ ಮೂಲಕ ಸರಕಾರದ ಲೆಕ್ಕಾಚಾರವನ್ನು ಬುಡಮೇಲು ಮಾಡುವಲ್ಲಿ ಯಾವುದೇ ಸಂದೇಹವಿಲ್ಲ. ಮುಖ್ಯಮಂತ್ರಿಗಳು ದಯಮಾಡಿ ಮದ್ಯಮಾರಾಟಕ್ಕೆ ಅನುಮತಿಸಬಾರದು. ಈ ವಿಷಯದಲ್ಲಿ ಈಗಾಗಲೇ ನಾವು ಮುಖ್ಯಮಂತ್ರಿಗಳಿಗೆ ವಿಸ್ತೃತವಾಗಿ ಪತ್ರ ಬರೆದು ಮದ್ಯಮಾರಾಟದಿಂದ ಲಾಭಕ್ಕಿಂತ ಹಾನಿಯೇ ಹೆಚ್ಚು ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಮುಖ್ಯಮಂತ್ರಿಗಳು ಅದನ್ನು ಗಮನಿದ್ದಾರೆಂದು ಭಾವಿಸುತ್ತೇವೆ.
ದೇಶದ ಸಭ್ಯ ಸುಸಂಸ್ಕೃತ ನಾಗರಿಕರು, ಧರ್ಮಗುರುಗಳು, ದೇಶಪ್ರೇಮ ಹೊಂದಿದ ಯುವಕ ಯುವತಿಯರು ಕೇಂದ್ರ ಸರಕಾರ ಹಾಗು ರಾಜ್ಯ ಸರಕಾರದ ಮೇಲೆ ಒತ್ತಡ ತರುವ ಮೂಲಕ ಮದ್ಯಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಸಹಕರಿಸಬೇಕೆಂದು ಶ್ರೀಗಳು ಕೋರಿದ್ದಾರೆ. ಈ ವಿಷಯದಲ್ಲಿ ಎಲ್ಲ ಧರ್ಮಗುರುಗಳು ಒಗ್ಗಟ್ಟನ್ನು ಪ್ರದರ್ಶಿಸಿ ಸರಕಾರದ ನಡೆಯನ್ನು ಖಂಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

 

ಜಗದ್ಗುರು ತೋಂಟದ ಡಾ. ಸಿದ್ಧರಾಮ ಮಹಾಸ್ವಾಮಿಗಳು

ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ ಗದಗ-ಡಂಬಳ ಎಡೆಯೂರು

 

About Shivanand

Admin : Lingayat Kranti Monthly news paper 8884000008 [email protected]

Check Also

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?

    ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …

ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ

  ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …

ರಾಣಿ ಚನ್ನವೀರಮ್ಮ

  ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …

ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ

  ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …

ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

  ~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

Leave a Reply

Your email address will not be published. Required fields are marked *

error: Content is protected !!