Breaking News
Home / featured / ಮದುವೆ ಸಮಾರಂಭಗಳಿಗೆ ನಿಯಮ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಮದುವೆ ಸಮಾರಂಭಗಳಿಗೆ ನಿಯಮ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಇನ್ನುಮುಂದೆ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸಪ್ತಪದಿಗೆ 17 ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ

ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಮೇ 18ರಿಂದ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆಕೂಡ ಆಗಲಿದೆ.

ಸರ್ಕಾರ ಪಟ್ಟಿಮಾಡಿರುವ 17 ನಿಯಮಗಳನ್ನು ಮದುವೆಯಾಗುವವರು ಹಾಗೂ ಸಮಾರಂಭದಲ್ಲಿ ಭಾಗಿಯಾಗುವ ಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.

  1. 17 ಮಾರ್ಗಸೂಚಿ:
    ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ
  2. ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ
  3.  ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.
  4. ಕಂಟೈನ್ಮೆಂಟ್ ವಲಯದವರಿಗೆ ನಿರ್ಬಂಧ.
  5. ಸೂಕ್ತ ಸಾರ್ವಜನಿಕ ಸ್ಥಳ ಮತ್ತು ನೈಸರ್ಗಿಕ ವಾತಾವರಣ ಇರುವೆಡೆ ಮದುವೆ
  6. ಮದುವೆಗಳಲ್ಲಿ ಎಸಿಗಳು ನಿರ್ಬಂಧ.
  7. ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿಯಿರುವುದು ಕಡ್ಡಾಯ
  8. ಮದುವೆಗೆ ಬಂದವರ ಲಿಸ್ಟ್ ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ
  9. ಮದುವೆಗೆ ಬರೋರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು
  10.  ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ.
  11. ಮದುವೆಗೆ ಬರೋರಿಗೆ ಮಾಸ್ಕ್ ಕಡ್ಡಾಯ.
  12. ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.
  13. ಒಂದು ಮೀಟರ್ ಸಾಮಾಜಿಕ ಅಂತರ.
  14. ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಇರಬೇಕು
  15. ಸಾರ್ವಜನಿಕವಾಗಿ ಉಗುಳುವಂತಿಲ್ಲ.
  16. ಮದುವೆ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು.
  17. ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!