Breaking News
Home / featured / ವಿಶ್ವಪರಿಸರ ಪರಿಸರ ದಿನಾಚರಣೆ ಎಂದಕೂಡಲೇ ನೆನಪಾಗುವ ಸಾಲುಮರ ತಿಮ್ಮಕ್ಕ

ವಿಶ್ವಪರಿಸರ ಪರಿಸರ ದಿನಾಚರಣೆ ಎಂದಕೂಡಲೇ ನೆನಪಾಗುವ ಸಾಲುಮರ ತಿಮ್ಮಕ್ಕ

ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ , ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ.

ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.

ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.

ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ

ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.

ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು.

ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ.

ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು ನ್ಯಾಸ ನಿಧಿಯನ್ನು ನಿಯೋಜಿಸಲಾಗಿದೆ

ಈಗ ಹೇಳಿ ಅಕ್ಷರಸ್ಥ ಇದ್ದುಕೊಂಡು ಪರಿಸರ ಸಂರಕ್ಷಣೆ ಮಾಡುತ್ತಿರುವರು ಎಷ್ಟು ಜನ ???

ಅನಕ್ಷರಸ್ಥರಾಗಿ ಸಾಲುಮರದ ತಿಮ್ಮಕ್ಕ ಮಾಡಿರುವಂತಹ ಪರಿಸರ ಸಂರಕ್ಷಣೆಯ ಕೆಲಸ ಒಂದು ವೇಳೆ ಅಕ್ಷರಸ್ಥರು ಮಾಡಿದರೆ ನಮ್ಮ ಪ್ರಕೃತಿ ಸೌಂದರ್ಯ ಇನ್ನಷ್ಟು ಇಮ್ಮಡಿ ಆಗುವುದಿಲ್ಲವೇ??

– ಮೇನಕಾ ಪಾಟೀಲ್

About Shivanand

Admin : Lingayat Kranti Monthly news paper 8884000008 [email protected]

Check Also

ಇಳಕಲ್‌ನ ಗುರುಮಹಾಂತ ಸ್ವಾಮೀಜಿಗೆ ‘ಸಂಯಮ ಪ್ರಶಸ್ತಿ’

  ಇಳಕಲ್/ಚನ್ನಮ್ಮನ ಕಿತ್ತೂರು : ‘ಜನರಲ್ಲಿ ದುಶ್ಚಟಗಳನ್ನು ಬಿಡಿಸಲು ಮೌನಕ್ರಾಂತಿ ಕೈಗೊಂಡಿರುವ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ್ವರ …

ತಂದೆ ತಾಯಿಯ ಸೇವೆಯಿಂದ ಜೀವನ್ಮುಕ್ತಿ: ಬೈಲೂರು ನಿಜಗುಣಾನಂದ ಶ್ರೀಗಳು

  ನೇಗಿನಹಾಳ: ಪ್ರಪಂಚದ ಇತಿಹಾಸದ ಪುಟಗಳಲ್ಲಿ ನೋಡಿದಾಗ ಕೆಟ್ಟ ಮಕ್ಕಳು ಜನಿಸಿರಬಹುದು ಆದರೆ ಕೆಟ್ಟ ತಂದೆ-ತಾಯಿಗಳು ಜನಿಸಲು ಸಾಧ್ಯವಿಲ್ಲ ಮಕ್ಕಳಾದವರು …

ಡಿಕೆಶಿ ದಾರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್…! ಲಿಂಗಾಯತ ಹೋರಾಟ ವಿರೋಧ

  ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಬೆಂಬಲಿಸಿ ತಪ್ಪು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷಮೆ ಕೇಳಿ …

ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ

  ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?

    ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …

ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ

  ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …

ರಾಣಿ ಚನ್ನವೀರಮ್ಮ

  ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …

ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ

  ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …

ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

  ~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

Leave a Reply

Your email address will not be published. Required fields are marked *

error: Content is protected !!