Breaking News
Home / featured / ದುಬೈನಲ್ಲಿ ಬಸವಣ್ಣನ ಮೂರ್ತಿ ಸ್ಥಾಪನೆ: ಎಂ ಬಿ ಪಾಟೀಲ್ ಐತಿಹಾಸಿಕ ಸಾಧನೆ

ದುಬೈನಲ್ಲಿ ಬಸವಣ್ಣನ ಮೂರ್ತಿ ಸ್ಥಾಪನೆ: ಎಂ ಬಿ ಪಾಟೀಲ್ ಐತಿಹಾಸಿಕ ಸಾಧನೆ

ಬೆಂಗಳೂರು: ವಿಶ್ವಗುರು, ಸಮತಾವಾದಿ, ಕ್ರಾಂತಿಕಾರಿ ಬಸವಣ್ಣನವರ ವಚನಗಳು, ಬಸವ ಸಾಹಿತ್ಯದ ಮಹತ್ವ ಹಾಗೂ ಅವರ ಚಿಂತನಾಶೀಲ ವಿಚಾರಧಾರೆಗಳು ದೇಶ-ವಿದೇಶಗಳಲ್ಲಿ ಪಸರಿಸುತ್ತಿವೆ. ಈಗಾಗಲೇ ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣ ಪ್ರತಿಮೆ ಪ್ರತಿಷ್ಠಾಪಿಸುವ ಮೂಲಕ ಬಸವಣ್ಣನವರನ್ನು ಜಗತ್ತಿನಾದ್ಯಂತ ಪ್ರಚುರಪಡಿಸಿದ್ದು ಇತಿಹಾಸವಾದರೂ ಇದೀಗ ಲಿಂಗಾಯತ ಸಮುದಾಯದ ಮುಖಂಡ ಮಾಜಿ ಸಚಿವ ಎಂ.ಬಿ.ಪಾಟೀಲ್ ಮತ್ತೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ.

ಮಾಜಿ ಸಚಿವ ರಾಜ್ಯದ ಲಿಂಗಾಯತ ಮುಖಂಡರಾದ ಶಾಸಕ ಎಂ.ಬಿ.ಪಾಟೀಲ್ ಅವರ ಸಹಾಯ ಮತ್ತು ಸಹಕಾರದಿಂದ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗಿದೆ. ಆ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ.

ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!