Breaking News
Home / featured / ಗ್ರಾಮೀಣಾಭಿವೃದ್ದಿಗೆ ಎನ್‌ಎಸ್‌ಎಸ್ ಪೂರಕ: ಶಿವಯೋಗಿ ಹಿರೇಮಠ

ಗ್ರಾಮೀಣಾಭಿವೃದ್ದಿಗೆ ಎನ್‌ಎಸ್‌ಎಸ್ ಪೂರಕ: ಶಿವಯೋಗಿ ಹಿರೇಮಠ

 

ಜಮಖಂಡಿ: ಸ್ಥಳೀಯ ಬಿಎಲ್‌ಡಿ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ “ರಾಷ್ಟ್ರ ನಿರ್ಮಾಣದಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರ ಪಾತ್ರ” ಎಂಬ ವಿಷಯದ ಕುರಿತು ಅಂತರ್ಜಾಲ ವಿಚಾರ ಸಂಕೀರಣ ಜರುಗಿತು.

ವಿಚಾರ ಸಂಕೀರ್ಣದಲ್ಲಿ ಉಪನ್ಯಾಸಕರಾಗಿ ದಾಂಡೇಲಿ ಸಹಾಯಕ ಪ್ರಾಧ್ಯಾಪಕರಾದ ಶಿವಯೋಗಿ ಹಿರೇಮಠ ಅವರು ಮಹಾಮಾರಿ ಕೋವಿಡ್‌ನಂತಹ ಸಂದರ್ಭದಲ್ಲಿ ಶಿಬಿರಾರ್ಥಿಗಳು ಕೋವಿಡ್ ವಾರಿಯರ‍್ಸ್‌ಗಳಾಗಿ ಕಾರ್ಯನಿರ್ವಹಿಸಿ ಅಸಹಾಯಕರಿಗೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ವೈರಸ್ ಹರಡದಂತೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ.

ಭಾರತವು ಹಳ್ಳಿಗಳಿಂದ ಕೂಡಿದ ದೇಶವಾಗಿದ್ದು, ಹಳ್ಳಿಗಳು ಅಭಿವೃದ್ದಿ ಹೊಂದಿದರೆ ಭಾರತ ಸಮೃಧ್ದ ಹೊಂದಿ ಸಧೃಡವಾಗಿ ಪ್ರಗತಿಯ ದಾರಿಯಲ್ಲಿ ಸಾಗುತ್ತದೆ. ಎನ್‌ಎಸ್‌ಎಸ್ ಎಂಬುದು ಶಿಕ್ಷಣ ಸಂಸ್ಥೆಗಳು ಮತ್ತು ಗ್ರಾಮಗಳ ನಡುವಿನ ಕೊಂಡಿಯಾಗಿದೆ ಎಂದ ಅವರು ಭ್ರೂಣ ಹತ್ಯೆ, ಅಸ್ಪೃ಼ಷತೆ ಯಂತಹ ಅಮಾನವೀಯ ಕೃತ್ಯಗಳ ಕುರಿತು ಎನ್‌ಎಸ್‌ಎಸ್ ಶಿಬಿರಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಸರ್ಕಾರದ ಯೋಜನೆ, ಪಶುಗಳ ಆರೋಗ್ಯ ತಪಾಸಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಮೂಡನಂಬಿಕೆಗಳ ನಿರ್ಮೂಲನೆ, ಸ್ವಚ್ಚತಾ ಕಾರ್ಯ ಸೇರಿದಂತೆ ಅನೇಕ ಜನಪರ ಕಾರ್ಯಗಳು ನಡೆದು ಸ್ವಸ್ಥವಾದ ಸಮಾಜ ನಿರ್ಮಾಣವಾಬೇಕು ಎಂದು ಸಹಾಯಕ ಪ್ರಾಧ್ಯಾಪಕ ಶಿವಯೋಗಿ ಹಿರೇಮಠ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ರಘುವೀರ ಕುಲಕರ್ಣಿ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾ ಸೇ ಯೋ ಕಾರ್ಯಕ್ರಮಾಧಿಕಾರಿ ಪ್ರೋ. ಬಾಬುರಾವ್ ಕುಲಕರ್ಣಿ, ಸಹ ಕಾರ್ಯಕ್ರಮಾಧಿಕಾರಿ ಪ್ರೋ. ನಿಖಿಲ್ ಮಂಟೂರ, ನ್ಯಾಕ್ ಸಂಯೋಜಕಿ ಡಾ. ಶ್ರೀದೇವಿ ಸುವರ್ಣಖಂಡಿ , ಸಹಾಯಕ ಪ್ರಾಧ್ಯಾಪಕ ಸುಖದೇವ ಗಸ್ತಿ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!