Breaking News
Home / featured / ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಲಿಂಗೈಕ್ಯ

ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಲಿಂಗೈಕ್ಯ

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಕೋವಿಡ್-19 ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಾರಾಯಣರಾವ್ ಅವರಿಗೆ ಆಗಸ್ಟ್ 31ರಂದು ಸೋಂಕು ದೃಢಪಟ್ಟಿತ್ತು. ಆಪ್ತರ ಸಲಹೆಯ ಮೇರೆಗೆ ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಚೇತರಿಸಿಕೊಂಡಿದ್ದರು. ನಂತರ ರಾಜಕೀಯ ಮುಖಂಡರು ಹಾಗೂ ಗೆಳೆಯರಿಗೆ ಮೊಬೈಲ್‌ ಕರೆ ಮಾಡಿ ‘ನಾನು ಕ್ಷೇಮವಾಗಿದ್ದೇನೆ. ನನ್ನ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ ನಿಮಗೆಲ್ಲರಿಗೂ ವಂದನೆಗಳು’ ಎಂದು ಹೇಳಿದ್ದರು.  ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿತ್ತು.

ನಂತರದಲ್ಲಿ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ತೊಂದರೆ ಅನುಭವಿಸಿದ್ದರು. ಕಾಮಾಲೆ, ಅಧಿಕ ರಕ್ತದೊತ್ತಡದಿಂದ ಇನ್ನಷ್ಟು ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.

 

  • ಬಸವಕಲ್ಯಾಣದ ಶಾಸಕರಾಗಿದ್ದ ಆತ್ಮೀಯರಾದ ಸರಳ-ಸಜ್ಜನಿಕೆ ಸ್ವಭಾವದ ಶ್ರೀ ನಾರಾಯಣ ರಾವ್ ಅವರ ಅಗಲಿಕೆ ಸುದ್ದಿ ಅತೀವ ನೋವು ತಂದಿದೆ. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಶರಣರ ತತ್ವದಂತೆ ಕಾಯಕ ಮಾರ್ಗದಲ್ಲಿ ನಡೆದು ಬಂದು ರಾಜಕೀಯದಲ್ಲಿ ಜನಮನ್ನಣೆಗಳಿಸಿದ್ದರು. ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು.                 – ಮ್ ಬಿ ಪಾಟೀಲ್ 

ಬಸವ ಕಲ್ಯಾಣದ ಶಾಸಕ ಬಿ.ನಾರಾಯಣರಾವ್ ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಜನಪರ ಕಾಳಜಿಯ, ಬುದ್ದ, ಬಸವ , ಬಾಬಾಸಾಹೇಬರ ಸಮಾನತೆಯ ಸಿದ್ದಾಂತದಲ್ಲಿ ನಂಬಿಕೆ ಹೊಂದಿದ್ದ ನಾರಾಯಣರಾವ್ ನಿಧನ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಜಕ್ಕೂ ತುಂಬಲಾಗದ ನಷ್ಟ. ಆ ಮಹಾ ಚೇತನಕ್ಕೆ ನಮನಗಳು.

–ಲಕ್ಷ್ಮೀ ಹೆಬ್ಬಾಳ್ಕರ್

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!