Breaking News
Home / featured / ನಟ ಚೇತನ ರೈತ ನಾಯಕತ್ವ – ಅರೆಸ್ಟ್

ನಟ ಚೇತನ ರೈತ ನಾಯಕತ್ವ – ಅರೆಸ್ಟ್

 

ಬೆಂಗಳೂರು : ಸ್ಯಾಂಡಲ್ ವುಡ್, ಬಾಲಿವುಡ್ ನಟ ನಟಿಯರು ಡ್ರಗ್ ಕೇಸಲ್ಲಿ ಸಾಲಾಗಿ ಅರೆಸ್ಟ್ ಆಗೋ ಸಮಯದಲ್ಲೇ ನಟ Chetan Ahimsa ಕೂಡಾ ಅರೆಸ್ಟ್ ಆಗಿದ್ದಾರೆ. ಚೇತನ್ ಅವರನ್ನು ಪೊಲೀಸ್ ಗಾಡಿ ಹತ್ತಿಸಿದ್ದು ಯಾವುದೋ ಐಷಾರಾಮಿ ಪಾರ್ಟಿಯಲ್ಲಿ ಭಾಗಿಯಾಗಿದ್ದಕ್ಕೋ, ಡ್ರಗ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದಕ್ಕೋ ಅಲ್ಲ. ರೈತರ ಪರವಾದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ನಟ ಚೇತನ್ ಬಂಧನವಾಗಿದೆ.

ಬುದ್ಧ ಬಸವ ಅಂಬೇಡ್ಕರ್ ತತ್ವದಡಿಯಲ್ಲಿ ಹೋರಾಟ ಜೀವನ ಸಾಗಿಸುತ್ತ ನಡೆದಿರುವ ನಟ ಚೇತನ ಅವರು ಸಾಮಾಜಿಕ ಕಳಕಳಿ, ಜನಸಾಮಾನ್ಯರ ಸಂಕಷ್ಟಕ್ಕೆ ಸದಾ ಮಿಡಿಯುತ್ತಾರೆ. ಬಡವರ, ರೈತರ, ಕೂಲಿಕಾರ್ಮಿಕರ, ದೀನದಲಿತರ ಹಾಗೂ ಆದಿವಾಸಿ ಬುಡಕಟ್ಟು ಜನಾಂಗದವರು ಹಕ್ಕುಗಳಿಗಾಗಿ ನಿರಂತರ ಹೋರಾಟದಲ್ಲಿ ತೊಡಗುವ ನಿಜ ಜೀವನದಲ್ಲಿ ನಾಯಕನಟನಾಗಿದ್ದಾರೆ.

ಇವರು ಕೇವಲ ಒಬ್ಬ ಚಲನಚಿತ್ರ ನಟನಾಗದೇ, ಸಾಮಾಜಿಕ, ಧಾರ್ಮಿಕ ಹಕ್ಕುಗಳಿಗಾಗಿ ನಿರಂತರ ಚಳುವಳಿ ಆರಂಭಿಸಿದ್ದಾರೆ.

ಕೇಂದ್ರ ಸರ್ಕಾರದ ಜನವಿರೋದಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ನಡೆಯುತ್ತಿರುವ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿ ನಟ ಚೇತನ್ ಮತ್ತು ಅವರ ಸಂಗಾತಿ ಮೇಘಾ ಅವರು ಪ್ರತಿಭಟನ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭ ಚೇತನ್ ಮತ್ತವರ ಸಂಗಾತಿ ಮೇಘಾರವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕೀಯ ನಾಯಕರ ಜೊತೆ ಗುರುತಿಸಿಕೊಂಡಿದ್ದ
ನಟಿ ರಾಗಿಣಿ ಮತ್ತು ಸಂಜನಾ ಡ್ರಗ್ ಕೇಸ್ ನಲ್ಲಿ ಅರೆಸ್ಟ್ ಆದಾಗ ಕೆಲ ರಾಜಕೀಯ ಪಕ್ಷಗಳು ಮತ್ತು ನಾಯಕರು ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ನಮಗೂ ಈ ನಟಿರಿಗೂ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!