Breaking News
Home / featured / ಡಾ.ವಿಶ್ವನಾಥ ಪಾಟೀಲಗೆ ಬಿ.ಜೆ.ಪಿ ಟಿಕೇಟ…!

ಡಾ.ವಿಶ್ವನಾಥ ಪಾಟೀಲಗೆ ಬಿ.ಜೆ.ಪಿ ಟಿಕೇಟ…!

 

ಬೆಳಗಾವಿ: ಸಂಸದ ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಸಂಸದ ಸ್ಥಾನಕ್ಕೆ ಮಾಜಿ ಶಾಸಕ ಹಾಗೂ ಬೆಳಗಾವಿ ಜಿಲ್ಲಾ ಬಿ.ಜೆ.ಪಿ ಗ್ರಾಮಾಂತರ ನಿಕಟ ಪೂರ್ವ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಬಿ.ಜೆ.ಪಿಯಿಂದ ಕಣಕ್ಕಿಳಿಸುವ ಸಾದ್ಯತೆಗಳಿವೆ ಎಂದು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

ಈಗಾಗಲೇ ಬೈಲಹೊಂಗಲ ಶಾಸಕನಾಗಿ ಜನಮಾನಸದಲ್ಲಿ ಉಳಿದ ಡಾ.ಪಾಟೀಲ ಜಿಲ್ಲೆಯಲ್ಲಿ ಸೌಮ್ಯ ಸ್ವಭಾವದ, ಸಜ್ಜನ ಮತ್ತು ಸರಳ ರಾಜಕಾರಣಿ ಎಂದು ಹೆಸರು ವಾಸಿಯಾಗಿದ್ದಾರೆ.

ಜೊತೆಗೆ ಪ್ರತಿಷ್ಠಿತ ಕೆ.ಎಲ್.ಇ ಶಿಕ್ಷಣ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು ನಿರಂತರ ಜನಸಂಪರ್ಕದಲ್ಲಿ ಸಿಗುತ್ತಾರೆ.

ಜಿಲ್ಲೆಯಲ್ಲಿ ಲಿಂಗಾಯತ ಮತಗಳು ನಿರ್ಣಾಯಕವಾಗಿದ್ದು. ಜಿಲ್ಲೆಯಾದ್ಯಂತ ಸಂಚರಿಸಿ ಈಗಾಗಲೇ ಪಕ್ಷ ಸಂಘಟನೆ ಮಾಡಿದ ಅನುಭವ ಹೊಂದಿದ್ದು. ಬೆಳಗಾವಿ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನ ಲಿಂಗಾಯತ ಮುಖಂಡರೊಂದಿಗೆ ಉತ್ತಮ ಭಾದವ್ಯ ಹೊಂದಿದ್ದಾರೆ. ಲಿಂಗಾಯತ ಮತಗಳನ್ನು ಸೆಳೆಯುವ ಸೂಕ್ತ ವ್ಯಕ್ತಿ ಡಾ.ವಿಶ್ವನಾಥ ಪಾಟೀಲ ಎಂದು ಗುರುತಿಸಲಾಗಿದೆ.

ವರ್ಚಸ್ಸು: ನಿಕಟಪೂರ್ವ ಬಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಡಾ.ವಿಶ್ವನಾಾಥ ಪಾಟೀಲರು ಬೆೆಳಗಾವಿ ತುಂಬೆಲ್ಲ ಬಿ.ಜೆ.ಪಿ ಯನ್ನು ಗಟ್ಟಿಗೂಳಿಸಿದ್ದಾರೆ. ಇವರ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ನಡೆದ ಗೋಕಾಕ ಮತ್ತು ಅಥಣಿ ವಿಧಾನಸಭಾ ಉಪಚುಣಾವಣೆಯಲ್ಲಿ ಬಿ.ಜೆ.ಪಿ ಗೆಲವು ಸಾಧಿಸಿರುವುದನ್ನು ಗಮನಿಸಿ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷ ಇವರನ್ನು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!