Breaking News
Home / featured / ಲಿಂಗಾಯತ ನಾಯಕ ಎಂ.ಬಿ.ಪಾಟೀಲಗೆ ಬಿಜೆಪಿ ಗಾಳ?

ಲಿಂಗಾಯತ ನಾಯಕ ಎಂ.ಬಿ.ಪಾಟೀಲಗೆ ಬಿಜೆಪಿ ಗಾಳ?

 

ವಿಜಯಪುರ: ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕ, ವಿಜಯಪುರ ಜಿಲ್ಲೆ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್‌‌ ಶಾಸಕ ಎಂ.ಬಿ.ಪಾಟೀಲ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂಬ ಕಾಲ್ಪನಿಕ ವರದಿಯನ್ನು ಇತ್ತೀಚಿಗೆ ಮಾಧ್ಯಮದಲ್ಲಿ ನಾನು ಗಮನಿಸಿದ್ದೇನೆ. ಈ ವರದಿ ಸಂಪೂರ್ಣವಾಗಿ ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದದ್ದು.

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಎಂ.ಬಿ.ಪಾಟೀಲ ಅವರು ಲಿಂಗಾಯತ ಸಮಾಜದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವುದರಿಂದ ಅವರಿಗೆ ಬಿಜೆಪಿ ಗಾಳ ಹಾಕಿದೆ ಎನ್ನಲಾಗುತ್ತಿದೆ.

ಅಲ್ಲದೇ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಂತರ ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರ ಕೊರತೆ ಇರುವುದರಿಂದ ಪಾಟೀಲ ಅವರತ್ತ ಬಿಜೆಪಿ ಹೈಕಮಾಂಡ್‌ ಒಲವು ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಂದಿನ ವಿಧಾನಸಭಾ ಚುನಾವಣೆಗೆ ಎಂ.ಬಿ.ಪಾಟೀಲ ಅವರನ್ನು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಆಮಿಷವನ್ನು ಹೈಕಮಾಂಡ್‌ ಮುಂದಿಟ್ಟಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಎಂ.ಬಿ.ಪಾಟೀಲ ಒಲವು ತೋರಿಲ್ಲ ಎಂದು ತಿಳಿದುಬಂದಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!