Breaking News
Home / featured / ಐತಿಹಾಸಿಕ ಕಿತ್ತೂರು ಉತ್ಸವ-2020 ಕ್ಕೆ ಚಾಲನೆ

ಐತಿಹಾಸಿಕ ಕಿತ್ತೂರು ಉತ್ಸವ-2020 ಕ್ಕೆ ಚಾಲನೆ

 

ಚನ್ನಮ್ಮನ ಕಿತ್ತೂರು: ವಿಜಯದ ಸಂಕೇತ ರಾಣಿ ಚನ್ನಮ್ಮನ ‘ಆತ್ಮಜ್ಯೋತಿ’ ಯನ್ನು ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಚಾಲನೆ ನೀಡಲಾಯಿತು.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿರುವ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶುಕ್ರವಾರ(ಅ.23) ಆತ್ಮಜ್ಯೋತಿಯನ್ನು ಬರಮಾಡಿಕೊಳ್ಳಲಾಯಿತು.

ಶಾಸಕ ಮಹಾಂತೇಶ ದೊಡಗೌಡ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು.

ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು.

ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ನಿಚ್ಚಣಿಕೆಯ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಠದ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿದರು.

ರಾಣಿ ಕಿತ್ತೂರು ಚನ್ನಮ್ಮ ಪುತ್ಥಳಿಗೆ ಸ್ವಾಮೀಜಿಯವರು, ಗಣ್ಯರು ಹಾಗೂ ಜನಪ್ರತಿನಿಧಿಗಳು ಮಾಲಾರ್ಪಣೆ ನೆರವೇರಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಿತ್ತೂರು ಪ್ರವೇಶದ್ವಾರದ ಬಳಿಯ ಸಂಗೊಳ್ಳಿ ರಾಯಣ್ಣ ಮತ್ತು ಅಮಟೂರು ಬಾಳಪ್ಪ ಪುತ್ಥಳಿಗಳಿಗೂ ಮಾಲಾರ್ಪಣೆ ಮಾಡಲಾಯಿತು.

ಚನ್ನಮ್ಮ ವೃತ್ತದಿಂದ ಆರಂಭಗೊಂಡ ವೀರಜ್ಯೋತಿಯ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ನಿಚ್ಚಣಿಕಿ ಶ್ರೀ ಮಡಿವಾಳೇಶ್ವರ ಮಠದ ಕಡೆ ಹೊರಟಿತು.

ಅರೋಗ್ಯ ತಪಾಸಣಾ ಶಿಬಿರ: ಕಿತ್ತೂರು ಸಮುದಾಯ ಕೇಂದ್ರದ ಸಹಯೋಗದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಉಷ್ಣತಾ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು, ವೈಧ್ಯಾದಿಕಾರಿಗಳು, ಕಿರಿಯ ಆರೋಗ್ಯ ಸಹಾಯಕ ಪುರುಷ ಮತ್ತು ಮಹಿಳಾ ಸಿಬ್ಬಂದಿ, ದ್ವಿತೀಯ ದರ್ಜೆ ಸಹಾಯಕರು, ಔಷಧ ವಿತರಕರು, ನೇತ್ರಾಧಿಕಾರ ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

ರೈತ ಸಂಪರ್ಕ ಕೇಂದ್ರ ಉದ್ಘಾಟನೆ: ರೈತ ಸಂಪರ್ಕ ಕೇಂದ್ರವನ್ನು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ನಿಚ್ಚಣಿಕೆಯ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಠದ ಸ್ವಾಮೀಜಿ ಉದ್ಘಾಟಿಸಿದರು. ಶಾಸಕ ಮಹಾಂತೇಶ ದೊಡಗೌಡರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತಿವರ್ಷ ಮೂರು‌ ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸಲಾಗುತ್ತಿತ್ತು. ಕೋವಿಡ್-19 ಕಾರಣಕ್ಕೆ ಈ ಬಾರಿ ಕುಸ್ತಿಹಬ್ಬ, ಕ್ರೀಡಾ ಸ್ಪರ್ಧೆಗಳು, ವಿಚಾರ ಸಂಕಿರಣ ಹಾಗೂ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡಿರಲಿಲ್ಲ.

ಸಾಯಂಕಾಲ ಕಂದಾಯ ಇಲಾಖೆಯ ಸಹಯೋಗದಲ್ಲಿ ಕೋಟೆಯ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!