Breaking News
Home / featured / ವಿನಯ್ ಕುಲಕರ್ಣಿ ಜೊತೆಗೆ ಲಿಂಗಾಯತ ಸಮಾಜವಿದೆ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ವಿನಯ್ ಕುಲಕರ್ಣಿ ಜೊತೆಗೆ ಲಿಂಗಾಯತ ಸಮಾಜವಿದೆ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಬೆಂಗಳೂರು : ಲಿಂಗಾಯತ ಸಮಾಜದ ಹಿರಿಯ ಮುಖಂಡ,ಮಾಜಿ ಸಚಿವ ವಿನಯ ಕುಲಕರ್ಣಿ ಯವರನ್ನು ವಿಚಾರಣೆಯ ನೆಪದಲ್ಲಿ ಕರೆದುಕೊಂಡು ಹೋಗಿರುವ ಪೊಲೀಸರ ನಡೆ ಖಂಡಿಸುತ್ತೇವೆ.

ಲಿಂಗಾಯತ ಸಮಾಜದ ಮುಖಂಡ ಮಾಜಿ ಸಚಿವ ವಿನಯ ಕುಲಕರ್ಣಿ ಯವರನ್ನು ಸ್ಥಳಿಯ ರಾಜಕೀಯ ದ್ವೇಷದ ಒತ್ತಡಕ್ಕೆ ಮಣಿದು ಸಿ ಬಿ ಐ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ಕರೆದುಕೊಂಡು ಹೋಗಿರುವ ಕ್ರಮವನ್ನು ಲಿಂಗಾಯತ ಸಮಾಜ ಹಾಗೂ ಶ್ರೀ ಪೀಠ ತೀವ್ರವಾಗಿ ಖಂಡಿಸುತ್ತದೆ.

ಕಳೆದ ಹಲವು ದಿನಗಳಿಂದ ಪ್ರಕಣವೊಂದರ ತನಿಖೆಯ ವಿಚಾರದ ನೆಪ ಮಾಡಿಕೊಂಡು ಅಧಿಕಾರಿಗಳು ಕುಲಕರ್ಣಿಯವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.ಈ ಪ್ರಕರಣದಲ್ಲಿ ಸಿಗಿಸುವ ಉದ್ದೇಶವನ್ನಿಟ್ಟುಕೊಂಡು ಉದ್ದೇಶಪೂರ್ವಕವಾಗಿಯೇ ಇಂದು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ.

ರಾಜ್ಯದ ಬಹುಸಂಖ್ಯಾತ ಪಂಚಮಸಾಲಿ ಸಮಾಜವನ್ನು ಚುನಾವಣಾ ಸಮಯದಲ್ಲಿ ರಾಜಕೀಯವಾಗಿ ಬಳಸಿಕೊಂಡು ಅಧಿಕಾರಕ್ಕೆ ಏರಿದ ನಂತರ ರಾಜಕೀಯವಾಗಿ ಸಮರ್ಥ ಇರುವ ಸಮಾಜದ ಮುಖಂಡರನ್ನು ತುಳಿಯುವ ತಂತ್ರವನ್ನು ನಾವು ಯಾವ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ‌. ಪಂಚಮಸಾಲಿ ಸಮಾಜ ಬೆಂಬಲಿಸುವ ಪಕ್ಷ ರಾಜ್ಯದಲ್ಲಿ ಎಲ್ಲಾ ಸಮಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎನ್ನುವುದು ಇಂಥಹ ನಾಯಕರುಗಳು ಮರೆಯಬಾರದು.

ವಿನಯ ಕುಲಕರ್ಣಿ ಸಮಾಜದ ಒಬ್ಬ ನಾಯಕ ಮುಂಬಯಿ ಕರ್ನಾಟಕದಲ್ಲಿ ಅವರದೇ ಆದ ವ್ಯಕ್ತಿತ್ವವನ್ನು ರೂಪಿಸಿಕೊಂಡು ಬೆಳೆದವರು. ಸರ್ವ ಸಮಾಜದ ಒಳಿತಿಗಾಗಿ ಕೆಲಸ ಮಾಡಿ ಸರ್ವ ಜನಾಂಗದ ನಾಯಕರೆನಿಸಿಕೊಂಡವರು. ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಕೆಲವರು ಈ ಹಿಂದಿನಿಂದಲೂ ಧಾರವಾಡದಲ್ಲಿ ಮಾಡುತ್ತಾ ಬರುತ್ತಿದ್ದಾರೆ. ಅದು ನಮ್ಮ ಗಮನಕ್ಕೂ ಇದೆ. ಈ ಪ್ರಕರಣದ ಹಿಂದೆ ಯಾವ ಕಾಣದ ಕೈಗಳು ಕೆಲಸ ಮಾಡುತ್ತಲಿವೆ ಎನ್ನುವುದು ನಮಗೆ ಗೋತ್ತಿದೆ. ಇದನ್ನು ಇಲ್ಲಿಗೆ ನಿಲ್ಲಿಸದಿದ್ದರೆ ಸರಿ ಇಲ್ಲವಾದರೆ ಮುಂಬರುವ ಜಿಲ್ಲಾ ಪಂಚಾಯತ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಸಮಾಜ ತಕ್ಕ ಪಾಠ ಕಲಿಸಲು ಸಿದ್ದವಾಗಿದೆ ಎನ್ನುವುದು ಈ ಪಕ್ಷಗಳ ನಾಯಕರು ಮರೆಯಬಾರದು.

ಈ ಕೂಡಲೇ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನರು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುವುದರ ಮೂಲಕ ಸಮಾಜದ ನಾಯಕನಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಒತ್ತಾಯಿಸುತ್ತೇವೆ. ರಾಜಕಾರಣ ನಿಜಕ್ಕೂ ಶೋಭೆಯಲ್ಲ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!