Breaking News
Home / featured / ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

 

ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ ಎಂದು ಗದಗ-ಡಂಬಳದ ಡಾ‌. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ . ಯಡಿಯೂರಪ್ಪನವರು ಈ ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನವನ್ನು ಘೋಷಿಸಿಲ್ಲ ಮತ್ತು ಬಿಡುಗಡೆ ಮಾಡಿಲ್ಲ. ಅಷ್ಟೇ ಅಲ್ಲದೆ ಇದರ ಪ್ರಯೋಜನ ಯಾರಿಗೆ ? ಇದರ ಫಲಾನುಭವಿಗಳು ಯಾರು ಎಂಬುದು ಸಂದಿಗ್ಧವಾಗಿದೆ.

ಇತ್ತೀಚೆಗೆ ಚುನಾವಣೆಯ ಸಂದರ್ಭದಲ್ಲಿ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಅದು ಗೊಲ್ಲ ಅಭಿವೃದ್ಧಿ ನಿಗಮವೊ ? ಅಥವಾ ಕಾಡುಗೊಲ್ಲ ಅಭಿವೃದ್ಧಿ ನಿಗಮವೊ ? ಎಂಬ ಸಂದೇಹ ಉಂಟಾಗಿ ಆ ಸಮುದಾಯದಲ್ಲಿ ಗೊಂದಲವನ್ನುಂಟು ಮಾಡಿದೆ. ಅದೇ ರೀತಿ ಈ ಅಭಿವೃದ್ಧಿ ನಿಗಮದ ಪ್ರಯೋಜನ ಯಾರಿಗೆ ? ಇದು ವೀರಶೈವರಿಗೊ ? ಲಿಂಗಾಯತರಿಗೊ ? ಅಥವಾ ವೀರಶೈವ ಲಿಂಗಾಯತ ಎಂದು ಸ್ಪಷ್ಟವಾಗಿ ಪ್ರಮಾಣಪತ್ರ ಪಡೆದವರಿಗೊ ? ಎಂಬುದು ತಿಳಿದಿಲ್ಲ.

ಬಹಳಷ್ಟು ಲಿಂಗಾಯತರ ಜಾತಿ ಪ್ರಮಾಣಪತ್ರದಲ್ಲಿ ‘ಹಿಂದೂ ಲಿಂಗಾಯತ’ ಎಂದಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಪ್ರಯೋಜನ ಈ ಲಿಂಗಾಯತರಿಗೆ ದೊರೆಯಬಹುದೇ ಎಂಬುದು ಸಂದೇಹಾಸ್ಪದವಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಚಿಸಿದ ಈ ನಿಗಮವನ್ನು ಕುರಿತು ಸಾರ್ವಜನಿಕ ಚರ್ಚೆಯ ಅಗತ್ಯವಿದೆ ಎಂದು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈಗಾಗಲೇ ಅನೇಕ ನಿಗಮ – ಮಂಡಳಿ , ಅಕಾಡೆಮಿಗಳನ್ನು ಸರಕಾರ ಸ್ಥಾಪಿಸಿದೆ. ಅನೇಕ ನಿಗಮ ಮಂಡಳಿಗಳು ಅನುದಾನ ಕೊರತೆಯಿಂದ ನಲುಗುತ್ತಿವೆ . ಕೆಲವು ಸರಕಾರಕ್ಕೆ ಬೆಳೆಯಾನೆಯಂತಾಗಿವೆ . ಅವುಗಳ ನಿರ್ವಹಣೆಯೆ ಕಷ್ಟವಾಗಿದೆ. ಮೇಲಾಗಿ ಅಭಿವೃದ್ಧಿ ನಿಗಮಗಳಿಂದ ಸಣ್ಣ-ಪುಟ್ಟ ಸಮುದಾಯಗಳಿಗೆ ಮಾತ್ರ ಪ್ರಯೋಜನವಾಗಬಹುದು.

ಈ ಹಿನ್ನೆಲೆಯಲ್ಲಿ ಈ ಅಭಿವೃದ್ಧಿ ನಿಗಮವು ಬಹುಸಂಖ್ಯಾತ ಲಿಂಗಾಯತರಿಗೆ ಎಷ್ಟು ಪ್ರಯೋಜನಕಾರಿಯಾದೀತು ಎಂಬುದನ್ನು ಕಾಯ್ದು ನೋಡಬೇಕಾಗಿದೆ.

ಲಿಂಗಾಯತರು ಕರ್ನಾಟಕದಲ್ಲಿ ಬಹುಸಂಖ್ಯಾತ ಸಮುದಾಯವಾಗಿದ್ದು, ಅವರಿಗೆ ಹೆಚ್ಚಿನ ಮೀಸಲಾತಿಯ ಅವಶ್ಯಕತೆ ಇದೆ. ನೆರೆಯ ಮಹಾರಾಷ್ಟ್ರದಲ್ಲಿ ಸರಕಾರ ಅಲ್ಲಿಯ ಬಹುಸಂಖ್ಯಾತ ಮರಾಠಾ ಸಮುದಾಯಕ್ಕೆ ಪ್ರತಿಶತ 16 ರಷ್ಟು ಮೀಸಲಾತಿ ಘೋಷಿಸಿದಂತೆ ಲಿಂಗಾಯತರಿಗೆ ಮೀಸಲಾತಿ ಘೋಷಿಸಬೇಕು ಎಂದು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

Leave a Reply

Your email address will not be published. Required fields are marked *

error: Content is protected !!