Breaking News
Home / featured / ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 ರಂದು ಲಿಂಗೈಕ್ಯರಾದ ಹಿನ್ನಲೆಯಲ್ಲಿ ಅವರ ಸವಿನೆನಪಿಗಾಗಿ ರವಿವಾರ ನ. 22 ರಂದು ಸಾಯಂಕಾಲ 7 ಗಂಟೆಗೆ ಬೈಲೂರಿನ ನಿಷ್ಕಲ ಮಂಟಪದಲ್ಲಿ ಇರುವ ಶ್ರೀ ಹರ್ಡೆಕರ ಮಂಜಪ್ಪ ಸಭಾ ಭವನದಲ್ಲಿ ಸಮಸ್ತ ಬೈಲೂರು ಗ್ರಾಮಸ್ಥರು, ನಿಷ್ಕಲ ಮಂಟಪ ಹಾಗೂ ಗೆಳೆಯರ ಬಳಗದ ವತಿಯಿಂದ “ನುಡಿ ನಮನ’’ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿದ್ಯವನು ಪೂಜ್ಯ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಚಿಕ್ಕಮುನವಳ್ಳಿ ಆರೂಡ ಮಠದ ಶ್ರೀ ದಿವ್ಯ ಚೇತನ ಶಿವಪುತ್ರ ಮಹಾಸ್ವಾಮಿಗಳು ನೇತೃತ್ವವನ್ನು ವಹಿಸಲಿದ್ದು, ಮುಮ್ಮಿಗಟ್ಟಿ ಬಸವ ತತ್ವ ಪ್ರಸಾರಕರಾದ ಶ್ರೀ ಬಸವಾನಂದ ಮಹಾಸ್ವಾಮಿಗಳ ಸಮ್ಮುಖದಲ್ಲಿ ಶರಣ ಡಾ ಮಹೇಶ ಎಸ್ ಹೊತ್ತಗಿಮಠ ಅವರ ಅಧ್ಯಕ್ಷತೆಯಲ್ಲಿ ನುಡಿ ನಮನ ಕಾರ್ಯಕ್ರಮ ಜರುಗಲಿದೆ ಎಂದು ನಿಷ್ಕಲ ಮಂಟಪ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನುಡಿ ನಮನ ಕಾರ್ಯಕ್ರಮಕ್ಕೆ ಸಮಸ್ತ ಗ್ರಾಮಸ್ಥರು, ವೈದ್ಯರು, ಗೆಳೆಯರು, ಅಭಿಮಾನಿಗಳು ಪಾಲ್ಗೊಳ್ಳಬೇಕು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

Leave a Reply

Your email address will not be published. Required fields are marked *

error: Content is protected !!