ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ
Shivanand
2 weeks ago
featured, General News
811 Views
ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ
ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ಮುಖ್ಯಮಂತ್ರಿ ಶಿಲಾನ್ಯಾಸ ನೆರವೇರಿಸಿರುವುದು ಸಂತೋಷದ ಸಂಗತಿ. ಆದರೆ ಆ ನೆಪದಲ್ಲಿ ಸರ್ಕಾರ ದಿನಪತ್ರಿಕೆಗಳಿಗೆ ನೀಡಿದ ಜಾಹಿರಾತಿನಲ್ಲಿ ‘ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ’ ಎಂಬ ಮೊದಲ ವಾಕ್ಯವೇ ಗಂಭೀರ ದೋಷದಿಂದ ಕೂಡಿದೆ ಎಂದು ಗದಗ-ಡಂಬಳ ಜಗದ್ಗುರು. ಡಾ.ತೋಂಟದ ಸಿದ್ದರಾಮ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಶ್ರೀಗಳು, ಸನಾತನಕ್ಕೂ ಪ್ರಗತಿಪರ ಚಿಂತನೆಗೂ ಎಣ್ಣೆ – ಶೀಗೇಕಾಯಿ ಸಂಬಂಧ . ಅವೆರಡೂ ಒಂದೆಡೆ ಇರಲಾರವು. ಆದರೆ ಸರ್ಕಾರ ಜಾಹಿರಾತಿನ ಮೂಲಕ ಅವೆರಡನ್ನೂ ಒಂದುಗೂಡಿಸುವ ಪವಾಡ ವನ್ನೇ ಮಾಡಿದೆ. ಸನಾತನ ಮತ್ತು ಪ್ರಗತಿಪರ ಎಂಬ ಶಬ್ದಗಳನ್ನು ಒಂದುಗೂಡಿಸಬಹುದೆ ಹೊರತು ಸನಾತನ ಮತ್ತು ಪ್ರಗತಿಪರ ವಿಚಾರಧಾರೆಗಳನ್ನು ಒಂದುಗೂಡಿಸಲಾಗದು.
ಹನ್ನೆರಡನೆಯ ಶತಮಾನದಲ್ಲಿ ಸನಾತನದ ವರ್ಣವ್ಯ ವಸ್ಥೆ, ಜಾತಿಭೇದ, ಲಿಂಗಭೇದಗಳನ್ನು ವಿರೋಧಿಸಿ ಪ್ರಗತಿಪರ ಚಿಂತನೆಗೆ ಹೆಸರಾದ ಲಿಂಗಾಯತ ಧರ್ಮವನ್ನು ಸ್ಥಾಪಿಸಿರುವು ದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ. ಆದರೆ ಪ್ರಗತಿಪರ ವಿಚಾರಧಾರೆಯ ಪ್ರತಿಪಾದಕ ಬಸವಣ್ಣನವರನ್ನು ಸನಾತನ ( ಧರ್ಮ ) ಪ್ರತಿಪಾದಕರೆಂಬಂತೆ ಬಿಂಬಿಸಿ ಅವರಿಗೆ ಹಿಂದುತ್ವವನ್ನು
ಆರೋಪಿಸಿರುವುದು ಬಸವಣ್ಣನವರಿಗೆ, ಬಸವತತ್ವಾದರ್ಶಗಳಿಗೆ ಮಾಡಿದ ಅಪಚಾರ. ಜಾಹಿರಾತಿನಲ್ಲಿ ಸನಾತನ ಶಬ್ದವನ್ನು ಪ್ರಯೋಗಿಸುವ ಮೂಲಕ ಲಿಂಗಾಯತವೆಂಬ ಸ್ವತಂತ್ರ ಧರ್ಮದ ಅಸ್ತಿತ್ವವನ್ನು ಅಲ್ಲಗಳೆಯುವ ಹಾಗೂ ಲಿಂಗಾಯತರನ್ನು ಹಿಂದೂಗಳನ್ನಾಗಿಸುವತನ್ನ ಕಾರ್ಯಸೂಚಿಯನ್ನು ಸರ್ಕಾರವು ಪ್ರಕಟಿಸಿದೆ. ಲಿಂಗಾಯತ ಧರ್ಮವು ಪ್ರಗತಿಪರ ಚಿಂತನೆಯ ಧರ್ಮವಾಗಿದೆ. ಅನುಭವ ಮಂಟಪವೆಂಬುದು ಈ ಧರ್ಮದ ಪ್ರಗತಿಪರ ಚಿಂತನೆಗಳನ್ನು ನಡೆಸುತ್ತಿದ್ದ ಕಮ್ಮಟವಾಗಿತ್ತು ಎಂದು ಹೇಳಿದ್ದಾರೆ. ನೂತನವಾಗಿ ನಿರ್ಮಿಸಲಾಗುವ ಅನುಭವ ಮಂಟ ಪದಲ್ಲಿಯೂ ಪ್ರಗತಿಪರ ಚಿಂತನೆಗಳು ನಡೆಯಬೇಕೇ ಹೊರ ತು ಲಿಂಗಭೇದ , ಜಾತಿಭೇದ , ವರ್ಣಭೇದಗಳನ್ನು ಪ್ರತಿಪಾ ದಿಸುವ ಸನಾತನದ ಮರುಸೃಷ್ಟಿಯಾಗಬಾರದು ಎಂಬುದು ನಾಡಿನ ಸಮಸ್ತ ಪ್ರಗತಿಪರ ಚಿಂತಕರ ಅಭಿಪ್ರಾಯವಾಗಿದೆ. ಲಿಂಗಾಯತ ಧರ್ಮ ಸನಾತನವಾದುದಲ್ಲ , ಅದು 12 ನೇಶತಮಾನದಲ್ಲಿ ಉದಯಿಸಿದ ಪ್ರಗತಿಪರ ಚಿಂತನೆಯ ಧರ್ಮವಾಗಿದೆ. ಅದರ ಜನ್ಮಸ್ಥಳ ಆಗಿನ ಅನುಭವ ಮಂಟಪ. ನೂತನವಾಗಿ ನಿರ್ಮಾಣಗೊಳ್ಳುವ ಅನುಭವ ಮಂಟಪವನ್ನು ಪ್ರಗತಿಪರ ಚಿಂತನೆಗೆ ಮಾತ್ರ ಮೀಸಲಾಗಿ ರಿಸಬೇಕು ಎಂದು ಶ್ರೀಗಳು ಆಶಯ ವ್ಯಕ್ತಪಡಿಸಿದ್ದಾರೆ.
Check Also
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …
ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …
ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …
ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …
ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …